ಅನಂತ್ ನಾಗ್ : ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಹಾಗೂ ಆಸೀಫ್ ಶೇಖ್ ಇಬ್ಬರ ಮನೆಯ ಒಳಗೆ ಸ್ಫೋಟಕಗಳನ್ನು ಇರಿಸಲಾಗಿತ್ತು. ಸ್ಫೋಟ ಮಾಡಿ ನಾಶ ಮಾಡಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ನಲ್ಲಿರುವ ಉಗ್ರನ ಮನೆಯನ್ನು ಭಾರತೀಯ ಸೇನೆ ಬ್ಲಾಸ್ಟ್ ಮಾಡಿದೆ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಇದರ ಹೊಣೆಯನ್ನು ಲಷ್ಕರ್-ಎ-ತೊಯ್ಬಾದ ಅಂಗ ಸಂಸ್ಥೆ ದಿ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದ್ದು, ಲಕ್ಷರ್ ಉಗ್ರ ಆದಿಲ್ ಪ್ರಮುಖ ಪಾತ್ರ ವಹಿಸಿದ್ದಾಗಿ ದೃಢಪಟ್ಟಿದೆ.
ಆದಿಲ್ ಮನೆಯನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಇದರ ಜೊತೆಗೆ ದಕ್ಷಿಣ ಕಾಶ್ಮೀರದಲ್ಲಿರುವ ಮತ್ತೋರ್ವ ಉಗ್ರ ಆಸಿಫ್ ಶೇಕ್ನ ಮನೆಯನ್ನು ಕೆಡವಿದ್ದಾರೆ.ದೇಶದಲ್ಲಿ ಇಂತಹ ಉಗ್ರರು ಅತಿ ಯಾಗಿದ್ದು ಮುಂದೆಯೂ ಈ ರೀತಿ ಬೆಂಬಲ ನೀಡುವವರಿಗೆ ಕಂಡಲ್ಲಿ ಗುಂಡುಹೊಡೆಯಬೇಕೆಂದು ದೇಶದ ಪ್ರಜೆಗಳು ಅಕ್ರೋಶ ಹೊರಹಾಕಿದ್ದಾರೆ.
ಇದೀಗ ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎಂಟರ್ನಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.
26 ಜನರ ಸಾವಿಗೆ ಕಾರಣವಾದ ಪಹಲ್ಲಾಮ್ ನಲ್ಲಿ ಏ. 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ನಂಬಲಾದ ಎಲ್ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ಪ್ರಯತ್ನಗಳ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.
ಇಂದು ಬೆಳಿಗ್ಗೆ, ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಯಿತು. ಇದು ಗುಂಡಿನ ಚಕಮಕಿಗೆ ಕಾರಣವಾಯಿತು. ಈ ಹಿಂದೆ, ಭದ್ರತಾ ಪಡೆಗಳು ಹಿಂಬಾಲಿಸುತ್ತಿದ್ದ ಭಯೋತ್ಪಾದಕರಲ್ಲಿ ಒಬ್ಬರು ಆರಂಭಿಕ ಗುಂಡಿನ ಚಕಮಕಿಯ ಸಮಯದಲ್ಲಿ ಗಾಯಗೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.


