ಉಡುಪಿ : ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮಣಿಪಾಲದ ಹೆರ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿ ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಎಂದು ತಿಳಿದುಬಂದಿದೆ. ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಮೃತಳ ತಂದೆಯಾದ ಕೊಪ್ಪ ಹರಂದೂರು ಗ್ರಾಮದ ಮಹೇಶ್ ರವರು ಇತ್ತೀಚೆಗೆ ಡಯಾಲಿಸಿಸ್ ಹಿನ್ನಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶ್ರೀನಿಧಿ ಶೆಟ್ಟಿ ಹೆತ್ತವರ ಜೊತೆ ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿ ವಾಸಿಸುತ್ತಿದ್ದರು. ಮನೆಯನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.


