Thursday, July 23, 2026
Homeಜಿಲ್ಲೆಉಡುಪಿ : ಉಡುಪಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ ಇಂಗ್ಲಿಷ್,ಹಿಂದಿ, ಬರುವುದಿಲ್ಲ ಅವರಿಗೆ ಮತಹಾಕಬೇಡಿ...

ಉಡುಪಿ : ಉಡುಪಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಗೆ ಇಂಗ್ಲಿಷ್,ಹಿಂದಿ, ಬರುವುದಿಲ್ಲ ಅವರಿಗೆ ಮತಹಾಕಬೇಡಿ ಎಂದ ಜಯಪ್ರಕಾಶ್ ಹೆಗ್ಡೆ.

ಉಡುಪಿ : ಬಿಲ್ಲವ ಸಮುದಾಯದ ಅಭ್ಯರ್ಥಿಯಾ ವಿರುದ್ಧ ಬಂಟ್ ಸಮುದಾಯದ ಅಭ್ಯರ್ಥಿ ರಾಜಕೀಯದಲ್ಲಿ ಪರಿಣಿತಿ ಪಡೆದ ಕೋಟ ಶ್ರೀನಿವಾಸ್ ಪೂಜಾರಿ ಯವರನ್ನು ಅವಿಧ್ಯಾವಂತರೆಂದು ಹೀಯಾಳಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ, ಹಾಗಾಗಿ ಅವರನ್ನು ಗೆಲ್ಲಿಸಬೇಡಿ ಎಂಬ ಬಾಲಿಶ ಹೇಳಿಕೆ ನೀಡಿದ್ದಾರೆ.ಈ ಇಬ್ಬರೂ ಹಿರಿಯರು ಕಣಕ್ಕೆ ಇಳಿಯುವ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಹೆಚ್ಚಿನ ಮಹತ್ವ ಬರುತ್ತದೆ ಎಂದು ಜನ ಅಂದುಕೊಳ್ಳುತ್ತಿರುವಾಗಲೇ ಜೆಪಿ ಹೆಗ್ಡೆ ಅವರು ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ತುಸು ದುಬಾರಿ ಮಾತನ್ನೇ ಆಡಿದ್ದಾರೆ.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಆಡಳಿತಾರೂಢ ಬಿಜೆಪಿ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಪಕ್ಷಗಳು ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಕರ್ನಾಟಕದ ಅಟಲ್​ ಬಿಜಾರಿ ವಾಜಪೇಯಿ ಎಂದೇ ಜನಜನಿತರಾದ ಕೋಟ ಶ್ರೀನಿವಾಸ ಪೂಜಾರಿ ಕಣಕ್ಕಿಳಿದಿದ್ದರೆ, ಕೊನೆ ಕ್ಷಣದಲ್ಲಿ ಜಾತಿ ಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ ಎಂಬ ಸಂಭಾವಿತ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.ಆದರೆ ಈ ಬಾರಿ ದೇಶದಲ್ಲಿ ಮೋದಿ ಪರ ಒಲವು ಇರುವುದರಿಂದ ”ಕಾಂಗ್ರೆಸ್ ಸರಕಾರ ಮಾಡು ಇಲ್ಲವೇ ಮಡಿಯಂತೆ ”ಇನ್ನಿಲದ ಆಸ್ವಾಸನೆ ನೀಡಿ ಅಧಿಕಾರಕ್ಕೆ ಏರುವ ಕನಸು ಕಾಣುತ್ತಿದೆ. ಅಭ್ಯರ್ಥಿಗಳು ವೈಯಕ್ತಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳುವ ಭರದಲ್ಲಿ ಪ್ರತಿಸ್ಪರ್ಧಿಗಳನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ ಎಂಬುದು ಬಿಲ್ಲವ ಸಮಾಜದ ನಾಯಕರ ಮಾತು.

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಬರುವುದಿಲ್ಲ, ಅವರನ್ನು ಆಯ್ಕೆ ಮಾಡಿದರೆ ದೆಹಲಿಯಲ್ಲಿ ಕೆಲಸಗಳಾಗುವುದಿಲ್ಲ ಎಂದು ಹೇಳಿರುವ ವೀಡಿಯೋ ವೈರಲ್ ಆಗಿದೆ. ಲೋಕಸಭೆಯಲ್ಲಿ ಈ ಹಿಂದೆ ನಾನು ಕನ್ನಡದಲ್ಲಿ ಭಾಷಣ ಮಾಡುತ್ತೇನೆ ಎಂದು ಹೇಳಿದೆ, ಆಗ ಯಾರು ನಿಮ್ಮ ಕನ್ನಡ ಭಾಷಣವನ್ನು ಕೇಳುವುದಿಲ್ಲ, ಹಿಂದಿ ಅಥವಾ ಇಂಗ್ಲಿಷಿನಲ್ಲಿ ಮಾತನಾಡಿದರೆ ಸಂಸದರು ಕೇಳುತ್ತಾರೆ ಎಂದು ಹೇಳಿದ್ದರು ಎಂದು ಹೆಗ್ಡೆ ತಮಗಾಗಿದ್ದ ಅನುಭವವನ್ನು ಸ್ಮರಿಸಿದ್ದಾರೆ.ಈ ಬಗ್ಗೆ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ ಭಾಷೆ ನಮ್ಮ ಬದುಕಿನ ಭಾಗ ಅಷ್ಟೇ, ನನ್ನ ಮಾತೃಭಾಷೆ ಕನ್ನಡ ನನಗೆ ಚೆನ್ನಾಗಿ ಬರುತ್ತದೆ. ನನಗೆ ಭಾಷೆ ತೊಡಕಾಗುತ್ತದೆ ಎಂబ ಆತಂಕ ಮತದಾರರಿಗೆ ಬೇಡ, ಸಂಸದನಾಗಿ ಆರೇ ತಿಂಗಳಲ್ಲಿ ಹಿಂದಿಯಲ್ಲಿ ಭಾಷಣ ಮಾಡಿ, ನನ್ನ ಬಗ್ಗೆ ಆತಂಕ ಹೊಂದಿರುವ ಜಯಪ್ರಕಾಶ್ ಹೆಗ್ಡೆಯವರನ್ನೂ ಖುಷಿ ಪಡಿಸುತ್ತೇನೆ ಎಂದು ಕೂಲಾಗಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular