Saturday, August 8, 2026
Homeಕ್ರೈಂಉಡುಪಿ: ಡೇವಿಡ್ ಡಿಸೋಜ ಕೊಲೆ ಆರೋಪಿ ರಾಜು ಬಂಧನ ; ಪೊಲೀಸರ ಮೇಲೆ ಹಲ್ಲೆ, ಕಾಲಿಗೆ...

ಉಡುಪಿ: ಡೇವಿಡ್ ಡಿಸೋಜ ಕೊಲೆ ಆರೋಪಿ ರಾಜು ಬಂಧನ ; ಪೊಲೀಸರ ಮೇಲೆ ಹಲ್ಲೆ, ಕಾಲಿಗೆ ಗುಂಡು.

ಉಡುಪಿ : ಜಿಲ್ಲೆಯ ಕಾಪು ತಾಲೂಕಿನ ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ನಡೆದ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲೆ ಪ್ರಕರಣದ ಆರೋಪಿ ರಾಜುನನ್ನು ಕಾಪು ಪಿಎಸ್ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ ನೇತೃತ್ವದ ತಂಡ ಬಂಧಿಸಿ ಕರೆತರುತ್ತಿದ್ದ ವೇಳೆ, ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ ಆರೋಪಿ ಪರಾರಿಯಾಗುವುದನ್ನು ತಡೆಯಲು ಕಾಪು ಪಿಎಸ್ಐ ತೇಜಸ್ವಿ ಅವರು ಸರ್ವೀಸ್ ಪಿಸ್ತೂಲಿನಿಂದ ರಾಜುವಿನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆಯಲ್ಲಿ ಪಿಎಸ್ಐ ತೇಜಸ್ವಿ ಅವರಿಗೂ ಗಾಯವಾಗಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಭೇಟಿ ನೀಡಿ ತೇಜಸ್ವಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular