ಉಡುಪಿ : ಹೆತ್ತ ತಂದೆ-ತಾಯಿಯನ್ನೇ ಪುತ್ರನೊಬ್ಬ ಕೊಚ್ಚಿ ಕೊಲೆಗೈದಿರುವ ಆಘಾತಕಾರಿ ಘಟನೆ ಬ್ರಹ್ಮಾವರ ತಾಲೂಕಿನ ಗಾಂಧಿನಗರದಲ್ಲಿ ನಡೆದಿದೆ.
ನಿನ್ನೆ ರಾತ್ರಿ ನಡೆದ ಘಟನೆಯಲ್ಲಿ ಶಾಹಿದ್ ಅಲಿ (31) ಎಂಬಾತ ತನ್ನ ತಂದೆ-ತಾಯಿಯನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದಾನೆ. ಘಟನೆ ಬಳಿಕ ಶಾಹಿದ್ ಅಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕೊಲೆಯ ಹಿಂದಿನ ಕಾರಣ ಸೇರಿದಂತೆ ಘಟನೆಯ ಸಂಪೂರ್ಣ ವಿವರಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

