Friday, July 24, 2026
Homeಜಿಲ್ಲೆಉಡುಪಿ ; ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ.

ಉಡುಪಿ ; ನೈರುತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ.

ಉಡುಪಿ ; ಮುಂಬರುವ ಎಂಎಲ್‌ಸಿ ಚುನಾವಣೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಮೇ 16ರಂದು ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ನಮ್ಮ ಟಿವಿಯ ಎಂಡಿ ಡಾ.ಶಿವಶರಣ ಶೆಟ್ಟಿ, ಬಿಜೆಪಿಯ ಹಿರಿಯ ಕಾರ್ಯಕರ್ತರಾದ ವಿಶ್ವನಾಥ್, ಚೇತನ್ ಮಂದಣ್ಣ, ಎಂ.ಶಂಕರ್ ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಉಡುಪಿಯಿಂದ ಮೂರು ಬಾರಿ ಶಾಸಕರಾಗಿದ್ದ ರಘುಪತಿ ಭಟ್ ಅವರಿಗೆ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಆದರೆ ಅಸಮಾಧಾನಗೊಂಡ ಭಟ್ ಪಕ್ಷದ ನಾಯಕರ ಇಚ್ಛೆಯಂತೆ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕೆ ಒಪ್ಪಿಗೆ ಸೂಚಿಸಿದ್ದರು.ಆದರೆ, ಎಂಎಲ್‌ಸಿ ಚುನಾವಣೆಯ ಟಿಕೆಟ್‌ನಿಂದ ವಂಚಿತರಾದಾಗ ಅವರು ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular