Friday, August 7, 2026
Homeಜಿಲ್ಲೆಉಡುಪಿ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ.

ಉಡುಪಿ : ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಗೆ ಗುಂಡಿಕ್ಕಿ ಹತ್ಯೆ.

ಉಡುಪಿ : ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಮಾಹಿತಿಯ ಪ್ರಕಾರ, ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಗಿದ್ದು, ಹತ್ಯೆಯ ಹಿಂದಿನ ಕಾರಣ ಪತ್ತೆಹಚ್ಚಲು ಬಹುಮುಖ ತನಿಖೆ ಕೈಗೊಳ್ಳಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಪಡುಬಿದ್ರಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular