ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಖಾಸಗಿ ಬಸ್ಸೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.


ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಇಡಿಸಿ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ನಿರ್ವಾಹಕರು ಸಮಯಪ್ರಜ್ಞೆ ಮೆರೆದು ಬಸ್ಸಿನಲ್ಲಿದ್ದ ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಿರ್ವಾಹಕರ ಸಮಯೋಚಿತ ಕ್ರಮದಿಂದಾಗಿ ಭಾರೀ ಅನಾಹುತವೊಂದು ತಪ್ಪಿದ್ದು, ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

