Wednesday, August 5, 2026
Homeಜಿಲ್ಲೆಉಡುಪಿ : ಮಣಿಪಾಲದಲ್ಲಿ ಮಾರಣಾಂತಿಕ ಹಲ್ಲೆ ; ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಜೈಲು...

ಉಡುಪಿ : ಮಣಿಪಾಲದಲ್ಲಿ ಮಾರಣಾಂತಿಕ ಹಲ್ಲೆ ; ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಜೈಲು ಪಾಲು.

ಉಡುಪಿ : ಮಣಿಪಾಲದ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆಗಸ್ಟ್‌ 2ರಂದು ರಾತ್ರಿ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ನಡೆದ ಘಟನೆಯಲ್ಲಿ, ಎರಡು ಕಾರುಗಳಲ್ಲಿ ಬಂದ ಆರೋಪಿಗಳು ಪವನ್ ಕುಮಾರ್ ಹಾಗೂ ಅವರ ಸ್ನೇಹಿತರನ್ನು ತಡೆದು ಜಗಳ ಆರಂಭಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪವನ್ ಕುಮಾರ್ ಅವರ ಮೇಲೆ ಮೆಟಲ್ ಪಂಚ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಮೂಗಿಗೆ ಗಂಭೀರ ಗಾಯವಾಗಿದ್ದು, ಮಧ್ಯಪ್ರವೇಶಿಸಿದ ಯಶ್‌ರಾಜ್ ಮತ್ತು ಶ್ರೇಯಸ್ ಅವರ ಮೇಲೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಪ್ರಕರಣ ದಾಖಲಿಸಿಕೊಂಡ ಮಣಿಪಾಲ ಪೊಲೀಸರು ಅಕ್ಷಯ್ ಎ., ಪುನೀತ್ ಎಸ್., ಶಮಂತ ಕೆ.ಆರ್. ಹಾಗೂ ಯಶವಂತ್ ಬಿ.ಜೆ. ಎಂಬ ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತರೆಲ್ಲರೂ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಪ್ರಕರಣದ ಕುರಿತು ಮಣಿಪಾಲ ಪೊಲೀಸ್ ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್. ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular