Saturday, March 14, 2026
Flats for sale
Homeಜಿಲ್ಲೆಉಡುಪಿ : ಮನೆಯಿಂದ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ !

ಉಡುಪಿ : ಮನೆಯಿಂದ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣಬಿಟ್ಟ ವೃದ್ಧೆ !

ಉಡುಪಿ : ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ಸಾಸ್ತಾನದ ಅಗ್ರಹಾರದಲ್ಲಿರುವ ತಮ್ಮ ಮನೆಯಿಂದ ಅ.15ರಂದು ಇಹಲೋಕ ತ್ಯಜಿಸಿದ ಘಟನೆ ವರದಿಯಾಗಿದೆ.

ಮೃತರನ್ನು ಚಡಗರ ಅಗ್ರಹಾರದ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ನಾರಾಯಣ ಉಪಾಧ್ಯ ಅವರ ಪತ್ನಿ ಪಿ ಯಶೋದಾ ನಾರಾಯಣ ಉಪಾಧ್ಯಾಯ (83) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿಯಿಂದ ಆಕೆಗೆ ಅಲ್ಪಸ್ವಲ್ಪ ಎದೆನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು. ತನ್ನ ಸ್ಥಿತಿಯ ನಡುವೆಯೂ ಸೋಮವಾರ ಮನೆಯಿಂದಲೇ ಮತದಾನ ಮಾಡಿದ್ದಾರೆ.ಮತದಾನಕ್ಕೂ ಮುನ್ನ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿಯೇ ಆಸ್ಪತ್ರೆಗೆ ತೆರಳಲು ಅವರು ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ತೆರಳಿ ಅಲ್ಲಿ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಯಶೋದಮ್ಮ ಮೃತಪಟ್ಟಿದ್ದಾರೆ.

ಸಾವಿನ ಮುನ್ನ ಹಕ್ಕು ಚಲಾಯಿಸಿದ ನಿರ್ವಹಿಸಿದ ಹಿರಿಯ ನಾಗರಿಕರ ಈ ಕರ್ತವ್ಯಪ್ರಜ್ಞೆಗೆ ಶ್ಲಾಘನೆ ವ್ಯಕ್ತವಾಗಿದೆ. ಮೃತರು ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular