ಉಡುಪಿ ; ಮುಖ್ಯಮಂತ್ರಿ (ಸಿಎಂ) ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್ ಗುರುವಾರ ಬೈಂದೂರಿಗೆ ಬಂದಿಳಿಯುತ್ತಿದ್ದಂತೆ ಹೆಲಿಪ್ಯಾಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸಿಎಂ ಬೊಮ್ಮಾಯಿ ಬೆಂಗಾವಲು ಪಡೆ ತೆರಳಿದ ಬಳಿಕ ಬೈಂದೂರಿನ ಅರೆಶಿರೋರ್ ಹೆಲಿಪ್ಯಾಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಸಿಎಂ ಬೊಮ್ಮಾಯಿ ಅದೇ ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ತೆರಳಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪಟ್ಟಿ ಬಿಡುಗಡೆಯಾದ ತಕ್ಷಣ ಸಿಎಂ ಬೊಮ್ಮಾಯಿ ಟೆಂಪಲ್ ರನ್ ಆರಂಭಿಸಿದ್ದಾರೆ.
ಬೊಮ್ಮಾಯಿ ಕೊಲ್ಲೂರಿಗೆ ಆಗಮಿಸಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.