Saturday, July 25, 2026
Homeಜಿಲ್ಲೆಉಳ್ಳಾಲ ; ಉಳ್ಳಾಲ ಬೀಚ್ ನಲ್ಲಿ ಮೂವರು ವಿಧ್ಯಾರ್ಥಿಗಳ ಮೇಲೆ ಹಲ್ಲೆ

ಉಳ್ಳಾಲ ; ಉಳ್ಳಾಲ ಬೀಚ್ ನಲ್ಲಿ ಮೂವರು ವಿಧ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು : ಉಳ್ಳಾಲ ಬೀಚ್‌ನಲ್ಲಿ ಪ್ರವಾಸಕ್ಕೆಂದು ಬಂದ ಮೂವರು ವಿದ್ಯಾರ್ಥಿನಿಯರ ಜೊತೆಯಲ್ಲಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಜೂನ್ 1ರ ಗುರುವಾರ ಸಂಜೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಈ ಘಟನೆ ನಡೆದಿದೆ.

ಕೇರಳದ ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳು ವಿಹಾರಕ್ಕೆಂದು ಬೀಚ್‌ಗೆ ಬಂದಿದ್ದರು. ಮೂವರು ಬಾಲಕರು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರೆಂದು ಗಮನಿಸಿದ ತಂಡವೊಂದು ಅವರನ್ನು ಹಿಂಬಾಲಿಸಿ ಸಮುದ್ರ ತೀರದಲ್ಲಿ ಹಲ್ಲೆ ನಡೆಸಿದೆ. ಗಾಯಗೊಂಡಿರುವ ಮೂವರು ಬಾಲಕರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಳಿದ ಮೂವರು ವಿದ್ಯಾರ್ಥಿನಿಯರು ತಮ್ಮ ಊರಿಗೆ ಮರಳಿದ್ದಾರೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೋಮೇಶ್ವರ ಸಮುದ್ರ ತೀರದಲ್ಲಿ ಉಳ್ಳಾಲ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.

ಇಲಾಖೆಯ 112 ವಾಹನವು ಸ್ಥಳಕ್ಕೆ ಧಾವಿಸಿ ಸಂತ್ರಸ್ತರನ್ನು ಆಸ್ಪತ್ರೆಗೆ ರವಾನಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗುತ್ತಿದೆ. ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ರಕ್ಷಣೆಗೆ ಎರಡು ತಂಡಗಳನ್ನು ರಚಿಸಲಾಗಿದೆ.
RELATED ARTICLES

LEAVE A REPLY

Please enter your comment!
Please enter your name here

Most Popular