ಉಳ್ಳಾಲ : ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ಹೊನಳು ಬೆಳಕಿನ ಲವ-ಕುಶ ಜೋಡು ಕರೆ ಕಂಬಳಕ್ಕೆ ತಲಪಾಡಿ ದುರ್ಗಾ ಪರಮೇಶ್ವರಿ ಕ್ಷೇತ್ರದ ಪ್ರದಾನ ಅರ್ಚಕರಾದ ಗಣೇಶ್ ಭಟ್ ಮತ್ತು ಶ್ರೀ ಕ್ಷೇತ್ರ ಕಣಂತೂರಿನ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅವರು ಧಾರ್ಮಿಕ ವಿಧಿ ವಿದಾನದೊಂದಿಗೆ ಚಾಲನೆ ನೀಡಿದರು.
ನರಿಂಗಾನ ಗ್ರಾಮದ ಮೋರ್ಲ- ಬೋಳದಲ್ಲಿ ಪ್ರಥಮ ವರ್ಷದ ಹೊನಲು ಬೆಳಕಿನ ನರಿಂಗಾನ ಕಂಬಳಕ್ಕೆ ಚಾಲನೆ ದೊರೆತಿದೆ.ಸರಕಾರಿ ಸ್ವಾಮ್ಯದ ವಿಶಾಲ ಕಂಬಳ ಕರೆಯಲ್ಲಿ ನಡೆಯುತ್ತಿರುವ ಉತ್ಸವದಲ್ಲಿ ಕಂಬಳ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಂಡರು.
ಕಂಬಳ ಸಮಿತಿ ಅಧ್ಯಕ್ಷರಾದ ಶಾಸಕ ಯು.ಟಿ ಖಾದರ್,ಶ್ರೀ ಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿಗಳಾದ ವೇದಮೂರ್ತಿ ವರ್ಕಾಡಿ ರಾಜೇಶ್ ತಾಳಿತ್ತಾಯ,ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕಾಜವ ಮಿತ್ತಕೋಡಿ,ಪ್ರಧಾನ ಸಂಚಾಲಕ ಗಿರೀಶ್ ಆಳ್ವ ಮೋರ್ಲ ,ಕೋಶಾಧಿಕಾರಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಜೊತೆ ಕಾರ್ಯದರ್ಶಿಗಳಾದ ಪ್ರೇಮಾನಂದ ರೈ ನೆತ್ತಿಲಕೋಡಿ ಮೊದಲಾದವರು ಉಪಸ್ಥಿತರಿದ್ದರು.