ಉಳ್ಳಾಲ: ಕಾರಣಿಕದ ಕ್ಷೇತ್ರವಾದ ಕಂಬ್ಲಪದವಿನ ಶ್ರೀ ದುರ್ಗಾಕಾಳಿ ದೇವಸ್ಥಾನದ ಅಷ್ಠಬಂಧ ದ್ರವ್ಯಕಲಶ ಹಾಗೂ ವಾರ್ಷಿಕ ಮಹೋತ್ಸವವು ಮಾ.22 ರಿಂದ 26 ರವರೆಗೆ ವಿಜ್ರಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಸಂಚಾಲಕ ಜಯಂತ ಶೆಟ್ಟಿ ಅವರು ಹೇಳಿದರು.
ಅವರು ಕಂಬಳಪದವಿನ ಶ್ರೀ ದುರ್ಗಾಕಾಳಿ ದೇವಸ್ಥಾನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ಅವರು ಮಾತನಾಡಿ, ದ್ರವ್ಯಕಲಶ ಮತ್ತು ವಾರ್ಷಿಕ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ, ಮಾ.22 ರಂದು ಮುಡಿಪುವಿನ ಮುಡಿಪ್ಪಿನ್ನಾರ್ ದೈವಸ್ಥಾನದ ವಠಾರದಿಂದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದ್ದು, ಆಡಳಿತ ಮೊಕ್ತೇಸರ ಮುರಳೀ ಮೋಹನ ಕೊಡಕ್ಕಲ್ಲು ಹೊರೆಕಾಣಿಕೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಸಂಜೆ 7 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು ವಿವಿಧ ಗಣ್ಯರ ಉಪಸ್ಥಿತಿಯೊಂದಿಗೆ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾ.23 ರಂದು ಗುರುವಾರದಂದು ಬೆಳಿಗ್ಗೆಯಿಂದ ಧಾರ್ಮಿಕ ವಿಧಿವಿಧಾನಗಳು ನಡೆದು ಸಂಜೆ ನಡೆಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ದೀಪಪ್ರಜ್ವಲನೆ ಮಾಡಲಿದ್ದಾರೆ.ಮಾ.24 ರಂದು ಕ್ಷೇತ್ರದಲ್ಲಿ ದ್ರವ್ಯಕಲಾಶಾಭಿಷೇಕ ಹಾಗೂ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಸಂಜೆ 4 ಗಂಟೆಗೆ ನಡೆಯುವ ಮಾತೃಸಂಗಮ ಕಾರ್ಯಕ್ರಮವನ್ನು ಒಡಿಯೂರಿನ ಸಾದ್ವಿ ಶ್ರೀ ಪರಮಪೂಜ್ಯ ಮಾತಾನಂದಮಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಲಿದ್ದಾರೆ. ಸಂಜೆ 6 ರಿಂದ ಕಟೀಲು ಮೇಳದಿಂದ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಸಿರುವುದು. ಮಾ.25 ರಂದು ಶನಿವಾರ ವಿವಿಧ ಧಾರ್ಮಿಕ ವಿದಿವಿಧಾನಗಳು , ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 7 ಗಂಟೆಗೆ ನಡೆಯಲಿರುವ ಧಾರ್ಮಿಕ ಸಭೆಯನ್ನು ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಲಿದ್ದು, ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಅರ್ಥಧಾರಿಗಳಿಗೆ ಗೌರವಾರ್ಪಣೆ ನಡೆಯಲಿದೆ.
ಮಾ.26 ರಂದು ಭಜನಾ ಕಾರ್ಯಕ್ರಮ, ವೈದಿಕ ಕಾರ್ಯಕ್ರಮ, ಚಂಡಿಕಾಯಾಗ ನಡೆಯಲಿದ್ದು, ಸಂಜೆ 7.30 ಕ್ಕೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಣಿಲದ ಮೋಹನದಾಸ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಬಳಿಕ ಬಿಲೆ ಕಟ್ಟೆರೆ ಆವಂದಿನ ನಾಟಕ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗೌರವ ಸಲಹೆಗಾರ ರವೀಂದ್ರ ರೈ ಹರೇಕಳ, ಮಹಿಳಾ ಸಮಿತಿಯ ಡಾ.ಸುರೇಖ, ಪ್ರದಾನ ಕಾರ್ಯದರ್ಶಿ ವಿದ್ಯಾ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ರವಿ ರೈ ಪಜೀರು ಮೊದಲಾದವರು ಉಪಸ್ಥಿತರಿದ್ದರು