Thursday, March 27, 2025
Flats for sale
Homeಜಿಲ್ಲೆಉಳ್ಳಾಲ ; ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ್ದ ಪೋಷಕರು.ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ...

ಉಳ್ಳಾಲ ; ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ್ದ ಪೋಷಕರು.ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ಪರಿಹಾರ ಗಿಟ್ಟಿಸಿ ಕೊಟ್ಟ ಶಾಸಕ ಖಾದರ್.

ಉಳ್ಳಾಲ ; ಬಸ್ಸಿನಿಂದ ಎಸೆಯಲ್ಪಟ್ಟ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದರು.ಸಂತ್ರಸ್ತ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಪರಿಹಾರ ತೆಗೆಸಿ ಕೊಟ್ಟಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆ,ಬೈದೆರೆಪಾಲು ನಿವಾಸಿಗಳಾದ ತ್ಯಾಗರಾಜ್ ,ಮಮತಾ ಕರ್ಕೇರ ದಂಪತಿಯ ಪ್ರಥಮ ಪುತ್ರ ಯಶರಾಜ್(16)ಕಳೆದ ಸೆ.7 ರಂದು ಬೆಳಿಗ್ಗೆ ಉಳ್ಳಾಲದಿಂದ ಸಿಟಿ ಬಸ್ಸಲ್ಲಿ ಮಂಗಳೂರಿನ ಕಾಲೇಜಿಗೆ ಪಯಣಿಸುತ್ತಿದ್ದಾಗ ಬಸ್ಸಿಂದ ಹೊರಗೆಸೆಯಲ್ಪಟ್ಟಿದ್ದ.ತಲೆಗೆ ಗಂಭೀರ ಗಾಯಗೊಂಡ ಯಶರಾಜನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸೆ.13 ರಂದು ಮದ್ಯಾಹ್ನ ಯಶರಾಜ್ನ‌ ಮೆದುಳು ನಿಷ್ಕ್ರಿಯಗೊಂಡಿದ್ದನ್ನ ವೈದ್ಯರು ಘೋಷಿಸಿದ್ದರು.ಪೋಷಕರ ನಿರ್ಧಾರದಂತೆ ಯಶರಾಜ್ನ ಅಂಗಾಂಗಗಳನ್ನ ದಾನ ಮಾಡಲಾಗಿತ್ತು.ಸಾವಲ್ಲೂ ಸಾರ್ಥಕ್ಯ ಮೆರೆದ ಯಶರಾಜ್ ಮನೆಗೆ ಭೇಟಿ ನೀಡಿದ ಶಾಸಕ ಖಾದರ್ ಅವರು ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ‌ ಪರಿಹಾರ ಕೊಡಿಸುವುದಾಗಿ ಮಾತು ಕೊಟ್ಟಿದ್ದಲ್ಲದೆ ತನ್ನ ಆಪ್ತ ಸಹಾಯಕರ ಮೂಲಕವೇ ಎಲ್ಲಾ ದಾಖಲೆಗಳನ್ನ ಸರಕಾರಕ್ಕೆ ಸಲ್ಲಿಸಿದ್ದರು.ಇದೀಗ ಯಶರಾಜ್ ತಂದೆ ತ್ಯಾಗರಾಜ್ ಅವರ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಜಮೆ‌ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗರಾಜ್ ಅವರು ನಮ್ಮಂತಹ ನೊಂದ ಕುಟುಂಬಕ್ಕೆ ಕೇಳದೆನೆ ಬಂದು ಪರಿಹಾರ ಒದಗಿಸಿ ಕೊಟ್ಟ ಶಾಸಕ ಖಾದರ್ ಅವರ ಸರಳತೆ,ಕಾಳಜಿಗೆ ಕೃತಜ್ನತೆಯನ್ನ ಸಲ್ಲಿಸಿದ್ದಾರೆ.

ಅಂಗಾಂಗ ದಾನ ಎಂಬುದು ಬಾವನಾತ್ಮಕ ವಿಚಾರ.ಇದರ ಬಗ್ಗೆ ಜನಜಾಗೃತಿ ಮೂಡಿಸಬೇಕು.ಯಶರಾಜ್ನ ಮೆದುಳು ನಿಷ್ಕ್ರಿಯಗೊಂಡಿದ್ದ ಸಂದರ್ಭದಲ್ಲಿ ಆತನ ಕುಟಂಬದವರು ಅಂಗಾಂಗ ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದು ಆತನಿಂದ ಇವತ್ತು ಆರು ಜನ ಜೀವಿಸುವಂತಾಗಿದೆ.ಮನೆ ಮಗನನ್ನ ಕಳ ಕೊಂಡ ಕುಟಂಬಕ್ಕೆ ಎಷ್ಟು ಕೊಟ್ಟರೂ ಕಮ್ಮಿನೆ.ಅವರನ್ನ ಅಭಿನಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಪರಿಹಾರ ಕೊಡಿಸಿದ್ದೇನೆ.ಇತ್ತೀಚಿಗೆ ಕುತ್ತಾರಲ್ಲಿ ನಡೆದ ಅಪಘಾತದಲ್ಲಿ ಕಲ್ಲಾಪಿನ ಭೂಷಣ್ ರೈ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನ ಮಾಡಲಾಗಿತ್ತು.ಆತನ ಬಡ ಕುಟುಂಬಕ್ಕೂ ಸಹಾಯವಾಗುವ ನಿಟ್ಟಿನಲ್ಲಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು ಶೀಘ್ರನೆ ಹಣ ಬಿಡುಗಡೆಯಾಗುವುದೆಂದು ಖಾದರ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular