Monday, March 17, 2025
Flats for sale
Homeಜಿಲ್ಲೆಕಡಬ ; ಇಬ್ಬರನ್ನು ಬಲಿ ತೆಗೆದ ಕಾಡಾನೆಯನ್ನು ಸೆರೆಹಿಡಿಯಲು ಆಫರೇಷನ್ ಎಲಿಫೆಂಟ್’ ತಂಡದಿಂದ ಕಾರ್ಯಚರಣೆ.

ಕಡಬ ; ಇಬ್ಬರನ್ನು ಬಲಿ ತೆಗೆದ ಕಾಡಾನೆಯನ್ನು ಸೆರೆಹಿಡಿಯಲು ಆಫರೇಷನ್ ಎಲಿಫೆಂಟ್’ ತಂಡದಿಂದ ಕಾರ್ಯಚರಣೆ.

ಕಡಬ ; ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ‘ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ.

ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಆಗಮಿಸಿದೆ.ಕಾಡಾನೆ
ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ ಹಾಗು ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಿ ಸಾಕಾನೆಗಳ ಸಹಕಾರದಲ್ಲಿ ಸೆರೆ ಕಾಡಾನೆಯನ್ನು ಹಿಡಿಯಲಾಗುತ್ತದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ಕಿಶೋರ್ ಕುಮಾರ್ ,ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆ ಹಾಗು ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular