Sunday, March 15, 2026
Flats for sale
Homeಜಿಲ್ಲೆಕಡಬ : ಹಠಾತ್ ಕುಸಿದು ಬಿದ್ದು 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು.

ಕಡಬ : ಹಠಾತ್ ಕುಸಿದು ಬಿದ್ದು 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು.

ಕಡಬ ; ಮಂಗಳೂರಿನ ಲಕ್ಷ್ಮಿ ಮೆಮೋರಿಯಲ್ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ.

ರೆಂಜಿಲಾಡಿಯ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತ ವಿದ್ಯಾರ್ಥಿನಿ.

ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿರಲಿಲ್ಲ.

ಆದರೆ ಆರೋಗ್ಯವಾಗಿದ್ದ ರಶ್ಮಿತಾ ನಿನ್ನೆ ರಾತ್ರಿ 10.30 ಕ್ಕೆ ಹಠಾತ್ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ರಶ್ಮಿತಾ ಸಾವಿನ ಹಿನ್ನೆಲೆಯಲ್ಲಿ ಕಾಲೇಜಿನ‌ ರಶ್ಮಿತಾ ಬ್ಯಾಚ್ ನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದ್ದು, ಬೆಳೆದು ನಿಂತಿದ್ದ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು‌ ಮುಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular