Thursday, July 23, 2026
Homeಕ್ರೈಂಕಲಬುರಗಿ : ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರು ಮಹಿಳೆಯರ ಬರ್ಬರ ಹತ್ಯೆ!

ಕಲಬುರಗಿ : ಹಾಡಹಗಲೇ ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರು ಮಹಿಳೆಯರ ಬರ್ಬರ ಹತ್ಯೆ!

ಕಲಬುರಗಿ : ಕೂಲಿ ಕೆಲಸಕ್ಕೆ ಹೋಗಿದ್ದ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರಕವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ತಾವರಗೇರಾ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಶರಣಮ್ಮ(45) ಕೆಕೆ ನಗರ ನಿವಾಸಿ, ಚಂದಮ್ಮ(45) ತಾಜ್ ಸುಲ್ತಾನ್ ಪುರ ನಿವಾಸಿಗಳೆಂದು ತಿಳಿದುಬಂದಿದೆ. ನಗರದ ಗಂಜ್ ನಿಂದ ಬಸ್ ನಲ್ಲಿ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದ್ದು ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದುಷ್ಕರ್ಮಿಗಳು ಗಂಭೀರವಾಗಿ ಹಲ್ಲೆ ನಡೆಸಿ ಬಳಿಕ ತಲೆಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular