ಕಲಬುರಗಿ : ರಾಜ್ಯದಲ್ಲಿ ಬಾಣಂತಿಯರ ಸಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಕಲಬುರಗಿಯ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯ ಸಾವು ಸಂಭವಿಸಿದೆ.
ಮೃತಪಟ್ಟ ಬಾಣಂತಿಯನ್ನು ಭಾಗ್ಯಶ್ರೀ (22) ಎಂದು ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿತ್ತು ಬಳಿಕ ಬಾಣಂತಿ ಸಿರಿಯಸ್ ಹಿನ್ನೆಲೆ ಕಲಬುರಗಿ ಜಿಲ್ಲಾಸ್ಪತ್ರೆಗೆ ಸಿಫ್ಟ್ ಮಾಡಲಾಗಿತ್ತು. ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಭಾಗ್ಯಶ್ರೀ ಸಾವನ್ನಪ್ಪಿದ್ದು ವೈಧ್ಯರ ನಿರ್ಲಕ್ಷ್ಯವೆಂದು ಪೋಷಕರು ಆರೋಪಿಸಿದ್ದಾರೆ.
ಮೃತ ಬಾಣಂತಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಟಕಿ ಗ್ರಾಮದ ನಿವಾಸಿಯಾಗಿದ್ದು ಹೆರಿಗೆಗಾಗಿ ನಿನ್ನೆ ಮಧ್ಯಾಹ್ನ 1 ಗಂಟೆಗೆ ಅಫಜಲಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದ ಭಾಗ್ಯಶ್ರೀ. ಹೆರಿಗೆ ಬಳಿಕ ಬಿಪಿ ಲೋ ಅಂತಾ ಹೇಳಿ ಕಲಬುರಗಿ ಜಿಲ್ಲಾಸ್ಪತ್ರೆಗೆ ವೈದ್ಯರು ರವಾನಿಸಿದ್ದಾರೆ.
ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಭಾಗ್ಯಶ್ರೀ ಸಾವನ್ನಪ್ಪಿದ್ದು ವೈದ್ಯರ ನಿರ್ಲಕ್ಷವೇ ಬಾಣಂತಿ ಸಾವಿಗೆ ಕಾರಣ ಅಂತಾ ಕುಟುಂಬಸ್ಥರ ಆರೋಪಿಸಿದ್ದಾರೆ.