ಕಲಬುರಗಿ : ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಯಾದಗಿರಿಯಿಂದ ವಾಪಸ್ ಆಗುತ್ತಿದ್ದ ವೇಳೆ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಹಾಗೂ ಫಾತೀಮಾ ಅಲೀ (38) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


