ಕಲಬುರಗಿ : ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿ ಹೊಡೆದು ಮ್ಯಾಕ್ಸಿಕ್ಯಾಬ್ ನಲ್ಲಿದ್ದ ಐವರು ಸ್ಥಳದಲ್ಲೆ ಸಾವನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ವಾಜೀದ್ , ಮೆಹಬೂಬಿ , ಪ್ರಿಯಾಂಕಾ , ಮೇಹಬೂಬ್ ಎಂದು ತಿಳಿದುಬಂದಿದೆ. ಸ್ಥಳದಲ್ಲೆ ಐವರ ಸಾವನಪ್ಪಿದ್ದು ಹನ್ನೊಂದು ಜನರಿಗೆ ಗಂಭಿರ ಗಾಯಗಳಾಗಿದೆ.
ಮೃತರೆಲ್ಲರೂ ಬಾಗಲಕೋಟೆ ಜಿಲ್ಲೆ ಮೂಲದವರಾಗಿದ್ದು ಕಲಬುರಗಿ ಖಾಜಾ ಬಂದೇನಾವಾಜ್ ದರ್ಗಾಕ್ಕೆ ಬರುತ್ತಿರುವಾಗ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


