ಕಾರವಾರ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಸಂಸದ ಅನಂತ್‌ಕುಮಾರ್ ಹೆಗೆಡೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಸಂಸದ ಅನAತ್‌ಕುಮಾರ್ ಹೆಗಡೆ ಕುಮಟಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಹೇಳಿಕೆ ನೀಡುವ ಜತೆಗೆ ಸಾಮಾಜಿಕ ಅಶಾಂತಿಗೆ ಕಾರಣವಾಗುವ ಮಾತುಗಳನ್ನುಆಡಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸ್ವಯಂ ಪ್ರೇರಿತ ದೂರನ್ನು ಕುಮಟಾ ಪೊಲೀಸರು ದಾಖಲಿಸಿದ್ದಾರೆ.
ಸಂಸದರು ಕುಮಟಾದ ಸಭೆಯಲ್ಲಿ ಮಾಡಿರುವ ಭಾಷಣ ಆಕ್ಷೇಪಾರ್ಹವಾಗಿರುವ ಹಿನ್ನೆಲೆಯಲ್ಲಿ ಸೆಕ್ಷೆನ್ 153 ಎ 505 ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ ತಿಳಿಸಿದ್ದಾರೆ. ಕುಮಟಾದಲ್ಲಿ ನಿನ್ನೆ ಭಾಷಣ ಮಾಡುವ ಸಂದರ್ಭದಲ್ಲಿ ಸಂಸದ ಅನಂತ್ ಕುಮಾರ್‌ಹೆಗಡೆ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದಪಳ್ಳಿಯೂ ಆಗಲಿದೆ.ಸಿರ್ಸಿಯ ಸಿಟಿ ಬಜಾರ್‌ನಲ್ಲೂ ಮಸೀದಿ ಇದೆ. ಅದು ಹಿಂದೆ ವಿಜಯವಿಠ್ಠಲ ದೇವಸ್ಥಾನವಾಗಿತ್ತು. ಶ್ರೀರಂಗಪಟ್ಟಣದಲ್ಲೂ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವುಗಳನ್ನೆಲ್ಲ ಮುಂದೆ ಕೆಡವಬೇಕು
ಎಂದಿದ್ದರು. ಇದಕ್ಕೆ ಸಂಬAಧಿಸಿದAತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.


