Friday, July 24, 2026
Homeಕ್ರೈಂಕಾರವಾರ : ಬೆಳ್ಳಂಬೆಳಗ್ಗೆ ಉದ್ಯಮಿಯ ಬರ್ಬರ ಹತ್ಯೆ..!

ಕಾರವಾರ : ಬೆಳ್ಳಂಬೆಳಗ್ಗೆ ಉದ್ಯಮಿಯ ಬರ್ಬರ ಹತ್ಯೆ..!

ಕಾರವಾರ : ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ನೆತ್ತರಕೊಡಿ ಹರಿದಿದೆ ಕಾರಿನಲ್ಲಿ ಸುಮಾರು ನಾಲ್ಕು ಮಂದಿ ದುಷ್ಕರ್ಮಿಗಳು ಮನೆಯೊಳಗೆ ಹೊಕ್ಕಿ ಏಕಾಏಕಿ ಹಲ್ಲೆ ಮಾಡಿ, ದಂಪತಿಗಳ ಮೇಲೆ ಹರಿತವಾದ ವಸ್ತು ಹೊಂದಿರುವ ರಾಡ್‌ನಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ.

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹರಿತವಾದ ವಸ್ತುವಿದ್ದ ರಾಡಿನ ಏಟಿಗೆ ವಿನಾಯಕ್ ಸ್ಥಳದಲ್ಲೇ ಸಾವು, ಪತ್ನಿ ವೃಶಾಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವೃಶಾಲಿಯವರ ತಲೆ ಹಾಗೂ ಕೈಗೆ ದುಷ್ಕರ್ಮಿಗಳು ರಾಡಿನಿಂದ ಹಲ್ಲೆ ನಡೆಸಿದ್ದಾರೆ. ಗಾಯಾಳು ವೃಶಾಲಿ ಅವರನ್ನು ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದು ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಭಾನುವಾರ ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕೊಲೆಯಾದ ವಿನಾಯಕ್ ಅವರು ಪತ್ನಿ ಹಾಗೂ ಪುತ್ರ ಸಮೇತ ಪುಣೆಯಲ್ಲಿ ವಾಸವಾಗಿದ್ದರು.ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆ ಹಾಗೂ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular