Thursday, March 12, 2026
Flats for sale
Homeಜಿಲ್ಲೆಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ವಿವಾದ: ಶಿಲ್ಪಿ ವಿರುದ್ಧ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್.

ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ವಿವಾದ: ಶಿಲ್ಪಿ ವಿರುದ್ಧ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್.

ಕಾರ್ಕಳ : ಕಾರ್ಕಳದ ಉಮ್ಮಿಕಲ್ ಗುಡ್ಡದಲ್ಲಿ ಕಂಚಿನ ಪ್ರತಿಮೆ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಶ್ ಆರ್ಟ್ ವರ್ಲ್ಡ್‌ನ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಿಸಲಾದ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಕಾರ್ಕಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಕಾರ್ಕಳ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಶಿಲ್ಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸಿದ್ದು, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಪೀಠ ಮಧ್ಯಂತರ ತಡೆ ನೀಡಿದೆ.

ಮುಂದಿನ ವಿಚಾರಣೆ ಸೆಪ್ಟೆಂಬರ್ 10 ರಂದು ನಡೆಯಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular