ಕಾಸರಗೋಡು : ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಆಂಬ್ಯುಲೆನ್ಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಮೇ 7 ಮಂಗಳವಾರ ವರದಿಯಾಗಿದೆ.

ಮೃತರನ್ನು ತ್ರಿಶೂರ್ ಮತ್ತು ಗುರುವಾಯೂರ್ ನಿವಾಸಿಗಳಾದ ಶ್ರೀನಾಥ್, ಶರತ್ ಮತ್ತು ಮೆಮನ್ ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ನಲ್ಲಿದ್ದ ರೋಗಿಗೆ ಗಾಯಗಳಾಗಿವೆ.
ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರಿನಿಂದ ಎದುರು ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮೂರನೇ ವ್ಯಕ್ತಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.


