ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66 ರ ಕುಂದಾಪುರ ಸಮೀಪದ ಕೆಎಸ್ಆರ್ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಮೂವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ.
ಕೊಲ್ಲೂರು ಮೂಕಾಂಬಿಕಾ ಪುಣ್ಯಕ್ಷೇತ್ರ ದರ್ಶನ ಮುಗಿಸಿ ಪಾಂಡಿಚೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಒಟ್ಟು ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಡಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್ಗಳಿಗೂ ಹಾನಿಯಾಗಿದೆ. ಗಾಯಗೊಂಡವರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ದುರ್ಘಟನೆ ನಡೆದಾಗ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನ ಸಂಚಾರ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.


