Thursday, July 23, 2026
Homeಜಿಲ್ಲೆಕುಣಿಗಲ್ : ಕುಣಿಗಲ್ ಬೈಪಾಸ್ ಬಳಿ ಶ್ರೀ ದುರ್ಗಾಂಬ ಬಸ್ ಅಪಘಾತ ; 12 ಪ್ರಯಾಣಿಕರಿಗೆ...

ಕುಣಿಗಲ್ : ಕುಣಿಗಲ್ ಬೈಪಾಸ್ ಬಳಿ ಶ್ರೀ ದುರ್ಗಾಂಬ ಬಸ್ ಅಪಘಾತ ; 12 ಪ್ರಯಾಣಿಕರಿಗೆ ಗಾಯ.

ಕುಣಿಗಲ್ : ಬೆಂಗಳೂರಿನಿಂದ ಕುಂದಾಪುರದತ್ತ ತೆರಳುತ್ತಿದ್ದ ಶ್ರೀ ದುರ್ಗಾಂಬ ಬಸ್ ಕುಣಿಗಲ್ ಬೈಪಾಸ್ ಸಮೀಪ ಅಪಘಾತಕ್ಕೀಡಾಗಿ 12 ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.

ಲಭ್ಯ ಮಾಹಿತಿಯ ಪ್ರಕಾರ, ಬಸ್ ಬೆಂಗಳೂರಿನಿಂದ ಕುಂದಾಪುರದತ್ತ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಗೊಂಡ ಪ್ರಯಾಣಿಕರಲ್ಲಿ ಓರ್ವರಿಗೆ ತಲೆಗೆ ಗಂಭೀರ ಗಾಯವಾಗಿದ್ದು, ಮತ್ತೋರ್ವರಿಗೆ ಸೊಂಟದ ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ 10 ಮಂದಿ ಮನಸ್ವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಸ್ಪತ್ರೆ ಮೂಲಗಳ ಪ್ರಕಾರ, ಮನಸ್ವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ಮಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಪ್ರಾಣಾಪಾಯ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರು ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡವರಲ್ಲಿ ಓರ್ವರು ಮಹಿಳೆಯಾಗಿದ್ದು, ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular