Friday, June 5, 2026
Flats for sale
Homeಜಿಲ್ಲೆಕೊಡಗು : ಕಾಫಿ ತೋಟ ವೀಕ್ಷಣೆಗೆ ತೆರಳಿದ್ದ ವೇಳೆ ಕಾಡಾನೆ ದಾಳಿ, ನಿವೃತ್ತ ಎಡಿಜಿಪಿಯವರ ಪತ್ನಿ...

ಕೊಡಗು : ಕಾಫಿ ತೋಟ ವೀಕ್ಷಣೆಗೆ ತೆರಳಿದ್ದ ವೇಳೆ ಕಾಡಾನೆ ದಾಳಿ, ನಿವೃತ್ತ ಎಡಿಜಿಪಿಯವರ ಪತ್ನಿ ಸಾವು .

ಕೊಡಗು : ಕೊಡಗು ಜಿಲ್ಲೆಯ ತಿತಿಮತಿ ಸಮೀಪದ ಕೋಣನಕಟ್ಟೆ ಪ್ರದೇಶದಲ್ಲಿ ಕಾಡಾನೆ ದಾಳಿಗೆ ನಿವೃತ್ತ ಎಡಿಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (61) ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮಾಹಿತಿಯ ಪ್ರಕಾರ, ಸಂಧ್ಯಾ ಅವರು ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿಗೆ ಕಾಫಿ ತೋಟ ವೀಕ್ಷಣೆಗೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವೇಳೆ ಅವರೊಂದಿಗೆ ಇದ್ದ ಇಬ್ಬರು ಕಾಫಿ ತೋಟದ ಕಾರ್ಮಿಕರು ಕಾಡಾನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಈ ಘಟನೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದ್ದು, ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular