ಕೊಡಗು : ಜಿಲ್ಲೆಯ ಹಲವು ಗ್ರಾಮಗಳ ಜನತೆಗೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಇಂದು ಬೆಳಗ್ಗೆ 10.50ರ ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದು ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಗ್ರಾಮಗಳ ಜನರು ಆತಂಕಗೊಂಡಿದ್ದಾರೆ.
ಭೂಕಂಪ ಅಧ್ಯಯನಕ್ಕೆ ಸಿಎಂ ಸೂಚನೆ : ಈ ಬಗ್ಗೆ ಕಚೇರಿಯಲ್ಲಿ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಭೂಕಂಪನ ಸಂಭವಿಸಿರುವ ಕೊಡಗು ಜಿಲ್ಲೆಯಲ್ಲಿ 4 ಸಂಸ್ಥೆಗಳಿಂದ ಅಧ್ಯಯನ ನಡೆಸಲಾಗುವುದು ಎಂದು ಹೇಳಿದ್ದಾರೆ.