ಕೊಲ್ಕೊತ್ತಾ : ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆ ಯಲ್ಲಿ ಮತದಾರರ ಪಟ್ಟಿಯ ವಿಶೇಷ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ವೇಳೆಯಲ್ಲಿ ಮತಪಟ್ಟಿ ಯಿಂದ ತಮ್ಮ ಹೆಸರನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಪ್ರತಿಭಟನಾಕಾರರು ಮೂವರು ನ್ಯಾಯಾಧೀಶರು ಸೇರಿದಂತೆ ಒಟ್ಟು ಏಳು ಜಡ್ಜ್ಗಳನ್ನು ಸುಮಾರು 2 ಗಂಟೆಗಳ ಕಾಲ ಕೂಡಿ ಹಾಕಿದ ಘಟನೆ ನಡೆದಿದೆ.
ಬುಧವಾರ ಮಧ್ಯಾಹ್ನ ಮಾಲ್ಡಾದ ಕಾಲಿಯಾಚಕ್ನ ಮತದಾರರ ಪಟ್ಟಿಗೆ ಸಂಬAಧಿಸಿದ ಆಕ್ಷೇಪಣೆಗಳ ವಿಚಾರಣೆ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು ಕಚೇರಿಯನ್ನು ಸುತ್ತುವರಿದು ಅಧಿಕಾರಿಗಳನ್ನು ಹೊರಬರದಂತೆ ತಡೆದರು. ಮಧ್ಯಾಹ್ನ 4 ಗಂಟೆಯಿAದ ಮಧ್ಯರಾತ್ರಿ 1 ಗಂಟೆಯವರೆಗೆ ಅಧಿಕಾರಿಗಳು ಕಚೇರಿಯಲ್ಲೇ ಸಿಲುಕಿಕೊಂಡಿದ್ದರು. ಅಂತಿಮವಾಗಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ಭಾರಿ ಭದ್ರತೆಯಲ್ಲಿ ಅವರನ್ನು ರಕ್ಷಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆಗೆ ಸಂಬAಧಿಸಿದAತೆ ಕೋಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರು ಪತ್ರ ಬರೆದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗುರುವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿತು.ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಜೆಐ ಸೂರ್ಯಕಾಂತ್ ಅವರ ಪೀಠ, ಪಶ್ಚಿಮ ಬಂಗಾಳದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು. ಇದು ನ್ಯಾಯಾಧೀಶರನ್ನು ಬೆದರಿಸುವ ವ್ಯವಸ್ಥಿತ ಪ್ರಯತ್ನ ಆಗಿದೆ. ಸಿಬಿಐ ಅಥವಾ ಎನ್ಐಎ ಈ ಬಗ್ಗೆ ತನಿಖೆ ನಡೆಸಬೇಕು ಎಂದು ನ್ಯಾಯಪೀಠ ಹೇಳಿದೆ. ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿರುವ ಸಿಜೆಐ ಸೂರ್ಯಕಾಂತ್ ಅವರು, ಕೂಡಲೇ ನ್ಯಾಯಾಧೀಶರ ರಕ್ಷಣೆಗೆ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಮಧ್ಯರಾತ್ರಿ 2 ಗಂಟೆವರೆಗೂ ನಿಗಾ ಇಟ್ಟಿದ್ದೆ: ಸಿಜೆಐ ಕಾಂತ್ : ಬAಗಾಳದಲ್ಲಿ ಏಳು ಜಡ್ಜ್ಗಳಿಗೆ ಘೇರಾವ್ ಹಾಕಿದ್ದಕ್ಕೆ ಸಿಜೆಐ ಸೂರ್ಯಕಾಂತ್ ಅವರು ರಾಜ್ಯ ಸರ್ಕಾರದ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ನಾನು ಸ್ವತಃ ಮಧ್ಯರಾತ್ರಿ 2 ಗಂಟೆಯವರೆಗೆ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದೆ ಎಂದು ಹೇಳುವ ಮೂಲಕ ಸಿಜೆಐ ಬಂಗಾಳದ ಕಾನೂನು ಸುವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಂಗೆ ಯಾರು ಹೇಳೇ ಇಲ್ಲ: ಬಂಗಾಳದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ ಒತ್ತೆಯಾಳು ಪ್ರಕರಣಕ್ಕೆ ಸಂಬAಧಿಸಿದAತೆ ಸುಪ್ರೀAಕೋರ್ಟ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ಈ ವಿಷಯ ನನಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿರುವ ಅವರು, ಅಧಿಕಾರಿಗಳನ್ನು ಒತ್ತೆಯಾಗಿ ಇಟ್ಟುಕೊಂಡಿರುವ ಬಗ್ಗೆ ಅಧಿಕಾರಿಗಳು ನನಗೆ ತಿಳಿಸಲಿಲ್ಲ. ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಹೇಳಿದರು.


