Friday, March 13, 2026
Flats for sale
Homeರಾಜ್ಯಗದಗ : ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳ...

ಗದಗ : ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳ ಸಾವು.

ಗದಗ : ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಯಶ್ ಬರ್ತಡೇ ಹಿನ್ನೆಲೆ ಹುಟ್ಟಹಬ್ಬದ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ನಡೆದಿದೆ. ಮೃತರು ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಎಂದು ತಿಳಿದುಬಂದಿದೆ . ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ತಮ್ಮ ಇಷ್ಟದ ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡಬೇಕೆಂದು ತಡರಾತ್ರಿ ತಮ್ಮ ಖರ್ಚಿನಿಂದ ಬ್ಯಾನರ್ ತಯಾರಿಸಿದ್ದಾರೆ.ಈ ಹಿನ್ನಲೆ ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿ ಸೂರಣಗಿ ಗ್ರಾಮದ ಮೂವರು ಯುವಕರು ಧಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ನಟ ಯಶ್​ನ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ವಿದ್ಯುತ್ ತಗಲುತ್ತಿದ್ದಂತೆ ಕೂಗಾಟ ಚಿರಾಟ ಕೇಳಿ ಬಂದಿದ್ದು ಘಟನೆಯ ಲೈವ್ ವಿಡಿಯೋ ದೃಶ್ಯ ನೋಡಿದ್ರೆ ಎದೆಝಲ್ ಎನ್ನುವಂತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular