ಗುಲ್ಬರ್ಗ ; ಚಿಂಚೋಳ್ಳಿ ಬಿಜೆಪಿ ಶಾಸಕ ಡಾ.ಅವಿನಾಶ ಜಾಧವ್ ಅವರು ಶನಿವಾರ ರಾತ್ರಿ 10 ಗಂಟೆಗೆ ಪ್ರಚಾರ ಮುಗಿಸಿ ವಾಪಸಾಗುತ್ತಿದ್ದಾಗ ಚಂದನಕೇರಾ ಗ್ರಾಮದಲ್ಲಿ ಕಿಡಿಗೇಡಿಗಳು ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಕಾರಿನ ಕಿಟಕಿ ಗಾಜು ಒಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದೇ ವೇಳೆ ಬಿಜೆಪಿ ನಾಯಕರು ಇದು ಕಾಂಗ್ರೆಸ್ ನಾಯಕರ ಷಡ್ಯಂತ್ರ ಎಂದು ಆರೋಪಿಸಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಎಐಸಿಸಿ ಅಧ್ಯಕ್ಷ ಮಲಿಕಾರ್ಜುನ್ ಖರ್ಗೆ ಅವರನ್ನು ಸೋಲಿಸಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್ ಅವರ ಪುತ್ರ ಡಾ.ಜಾಧವ್ ಅವರು ಚುನಾವಣಾ ಪ್ರಚಾರ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಹಲವು ಲಂಬಾಣಿ ತಾಂಡಾಗಳಲ್ಲಿ ಸಂಚರಿಸಿ ಚಂದನಕೇರಾ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಕಲ್ಲು ತೂರಾಟದ ಘಟನೆಗೂ ಮುನ್ನ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಕ್ಕೆ ಗ್ರಾಮದ ಕೆಲವರು ವಿರೋಧ ವ್ಯಕ್ತಪಡಿಸಿದ್ದರು.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ರುದ್ರಪ್ಪ ಉಜ್ಜನಕೊಪ್ಪ ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ