Sunday, May 31, 2026
Flats for sale
Homeಕ್ರೀಡೆಚಂಡೀಗಢ : ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ವಿವಾದ : ಸಂಕಷ್ಟದಲ್ಲಿ ರಿಯಾನ್ ಪರಾಗ್.

ಚಂಡೀಗಢ : ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ವಿವಾದ : ಸಂಕಷ್ಟದಲ್ಲಿ ರಿಯಾನ್ ಪರಾಗ್.

ಚಂಡೀಗಢ : ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡುತ್ತಿರುವ ದೃಶ್ಯ ಬಹಿರಂಗವಾಗಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ರೋಚಕ ಜಯ ಸಾಧಿಸಿದರೂ, ಪರಾಗ್ ಅವರ ನಡೆ ಚರ್ಚೆಗೆ ಗ್ರಾಸವಾಗಿದೆ. ಪಂದ್ಯದ ವೇಳೆ ಅವರು ಔಟ್ ಆದ ಬಳಿಕ ಡ್ರೆಸ್ಸಿಂಗ್ ರೂಮ್‌ನಲ್ಲಿ ಇ-ಸಿಗರೇಟ್ ಬಳಕೆ ಮಾಡುತ್ತಿರುವ ದೃಶ್ಯ ಪ್ರಸಾರ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾರತದಲ್ಲಿ 2019ರಿಂದಲೇ ಇ-ಸಿಗರೇಟ್ ಮತ್ತು ವೇಪ್ ಬಳಕೆಯನ್ನು ನಿಷೇಧಿಸಲಾಗಿದೆ. ಕ್ರೀಡಾಂಗಣ ಹಾಗೂ ಡ್ರೆಸ್ಸಿಂಗ್ ರೂಮ್‌ನಲ್ಲಿ ಇಂತಹ ವಸ್ತುಗಳ ಬಳಕೆಯನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಕೂಡ ಕಟ್ಟುನಿಟ್ಟಾಗಿ ನಿಷೇಧಿಸಿದೆ.

ನಿಯಮಗಳ ಪ್ರಕಾರ, ಇದು ಕ್ರಿಮಿನಲ್ ಅಪರಾಧವಾಗಿದ್ದು,1 ವರ್ಷದವರೆಗೆ ಜೈಲು ಶಿಕ್ಷೆ ₹1 ಲಕ್ಷದವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ. ಇದೇ ವೇಳೆ, ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪರಾಗ್ ಅವರಿಗೆ ಭಾರಿ ದಂಡ 1–2 ಪಂದ್ಯಗಳ ನಿಷೇಧ ಹೇರಲಾಗುವ ಸಾಧ್ಯತೆಯೂ ಇದೆ.

ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ಘಟನೆ ಹಿನ್ನೆಲೆಯಲ್ಲಿ Board of Control for Cricket in India ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ.

ಹೇಳಿಕೆಯಲ್ಲಿ, ‘ಟಾಟಾ Indian Premier League 2026ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಸಂಖ್ಯೆ 40ರ ವೇಳೆ ಆಟಗಾರರು ಮತ್ತು ತಂಡದ ಅಧಿಕಾರಿಗಳಿಗೆ ಅನ್ವಯಿಸುವ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘಿಸಿದ್ದಕ್ಕಾಗಿ Rajasthan Royals ತಂಡದ ನಾಯಕ Riyan Parag ಅವರಿಗೆ ಪಂದ್ಯ ಶುಲ್ಕದ 25% ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ವಿಧಿಸಲಾಗಿದೆ’ ಎಂದು ತಿಳಿಸಿದೆ.

ಈ ಮೂಲಕ ಡ್ರೆಸ್ಸಿಂಗ್ ರೂಮ್‌ನಲ್ಲಿ ವೇಪಿಂಗ್ ಮಾಡಿದ ವಿಚಾರಕ್ಕೆ ಬಿಸಿಸಿಐ ಅಧಿಕೃತವಾಗಿ ಕ್ರಮ ಕೈಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular