Saturday, July 18, 2026
Homeಜಿಲ್ಲೆಚಿಕ್ಕಮಗಳೂರು : ಕಾರು–ಪಿಕಪ್ ವಾಹನಗಳ ಭೀಕರ ಡಿಕ್ಕಿ; ಮಹಿಳೆ ಗಂಭೀರ, ಹಲವರಿಗೆ ಗಾಯ..!

ಚಿಕ್ಕಮಗಳೂರು : ಕಾರು–ಪಿಕಪ್ ವಾಹನಗಳ ಭೀಕರ ಡಿಕ್ಕಿ; ಮಹಿಳೆ ಗಂಭೀರ, ಹಲವರಿಗೆ ಗಾಯ..!

ಚಿಕ್ಕಮಗಳೂರು : ಕಳಸ ತಾಲೂಕಿನ ಗಂಗನಕುಡಿಗೆ–ಹಿನಾರಿ ಸಮೀಪ ಕಾರು ಹಾಗೂ ಪಿಕಪ್ ವಾಹನಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಬಳಿಕ ರಸ್ತೆಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಜಾಮ್ ಉಂಟಾಯಿತು.
ಗಾಯಾಳುಗಳನ್ನು ತಕ್ಷಣ ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಕಳಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular