ಚಿಕ್ಕಮಗಳೂರು : ದಶಕದ ಬಳಿಕ ನಕ್ಸಲ್ ಚಟುವಟಿಕೆ ಕಂಡು ಬಂದಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ (ಎಎನ್ಎಫ್)ದ ಸಿಬ್ಬಂದಿಹಾಗೂ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕಾರ್ಯಾಚರಣೆ ವೇಳೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯಲ್ಲಿ ೩ ಬಂದೂಕು ಪತ್ತೆಯಾಗಿವೆ. ಈ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಮಾಹಿತಿ ಲಭ್ಯವಾಗಿದೆ.
ಬಂದೂಕು ಸಿಕ್ಕಿರುವ ಸಂಬAಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್, ಸಿಐಟಿ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ, ಪರಿಶೀಲನೆ ನಡೆಸಿದರು. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೆ ಇಬ್ಬರನ್ನು ವಶಕ್ಕೆ ಪಡೆದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ನಕ್ಸಲ್ ಪೀಡಿತ ಪ್ರದೇಶದಲ್ಲಿ ತೀವ್ರ ಕೂಂಬಿAಗ್ ಕಾರ್ಯಚರಣೆ ನಡೆಯುತ್ತಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಈದು ಗ್ರಾಮದಲ್ಲಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಮಾಡಿದ್ದರು. ಕೆಲವು ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂಬ ವದAತಿಗಳು ಹಬ್ಬಿದ್ದವು. ಈ ಬಗ್ಗೆ ಎಎನ್ಎಫ್ ಸಿಬ್ಬಂದಿ ಸ್ಥಳೀಯರನ್ನು ವಿಚಾಣೆ ಮಾಡಿದ್ದಾರೆ. ಆದರೆ ಸ್ಥಳೀಯರಿಂದ ಯಾವುದೇ ಮಾಹಿತಿ ದೊರೆತಿಲ್ಲ ಎಂಬುವುದು ಎಎನ್ಎಫ್ ಮೂಲಗಳು ತಿಳಿಸಿವೆ.


