Thursday, July 23, 2026
Homeರಾಜ್ಯಚಿಕ್ಕಮಗಳೂರು : ರಾಜ್ಯದ್ಯಂತ ಮುಂದುವರಿದ ಮಳೆ ಅಬ್ಬರ : ಚಿಕ್ಕಮಗಳೂರು-ಮಂಗಳೂರು ಹೆದ್ದಾರಿಯಲ್ಲಿ ಧರೆಗುರುಳಿದ ಬೃಹತ್ ಮರ,ಕೆಲಕಾಲ...

ಚಿಕ್ಕಮಗಳೂರು : ರಾಜ್ಯದ್ಯಂತ ಮುಂದುವರಿದ ಮಳೆ ಅಬ್ಬರ : ಚಿಕ್ಕಮಗಳೂರು-ಮಂಗಳೂರು ಹೆದ್ದಾರಿಯಲ್ಲಿ ಧರೆಗುರುಳಿದ ಬೃಹತ್ ಮರ,ಕೆಲಕಾಲ ಸಂಚಾರ ಬಂದ್ .

ಚಿಕ್ಕಮಗಳೂರು : ರಾಜ್ಯದಲ್ಲಿ ವರುಣನ ಆರ್ಭಟ ಗರಿಗೆದರಿದೆ, ಅಲ್ಲಲ್ಲಿ ಬೆಟ್ಟಗುಡ್ಡ ಕುಸಿಯುತ್ತಿದ್ದು ಹಲವರ ಪ್ರಾಣಕ್ಕೆ ಹಾನಿಯಾಗಿದೆ. ಮಲೆನಾಡಿನ ಭಾಗದಲ್ಲೂ ಭಾರೀ ಮಳೆ ಆಗುತ್ತಿದ್ದು, ನೂರಾರು ಮರಗಳು ಧರೆಗುರುಳಿವೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರವೇ ಆಗಿದೆ. NH-73 ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬಾಲಕ ಯುವಕ ಮೃತಪಟ್ಟ ಘಟನೆ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಪರಿಣಾಮವಾಗಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಹೇಗಾದರೂ ಮಾಡಿ ನಮಗೆ ಪರಿಹಾರ ಕೊಡಿಸಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಾವಿನಗುಣಿ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು ನಾಲ್ಕೈದು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಇದರಿಂದ ಕಾರ್ಮಿಕರು, ಸಾರ್ವಜನಿಕರು ಬೇರೆಡೆಗೆ ತೆರಳಲು ಸಾಧ್ಯವಾಗದೆ ಪರದಾಡುವಂತಾಗಿದೆ. ಒಂದೇ ರಸ್ತೆಯಲ್ಲಿ ಎರಡು ಕಡೆ ಮರಗಳು ಬಿದ್ದಿದ್ದು, ತೆರವಿಗೆ ಅರಣ್ಯ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular