Wednesday, August 5, 2026
Homeರಾಜ್ಯಚಿಕ್ಕೋಡಿ : ನಿಪ್ಪಾಣಿಯಲ್ಲಿ ನಿಮ್ಮ ರಾಮ ಮಂದಿರ ಸ್ಫೋಟಿಸ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ.

ಚಿಕ್ಕೋಡಿ : ನಿಪ್ಪಾಣಿಯಲ್ಲಿ ನಿಮ್ಮ ರಾಮ ಮಂದಿರ ಸ್ಫೋಟಿಸ್ತೇವೆ, ಸುಧಾರಿಸಿಕೊಳ್ಳಿ ಎಂದು ಬೆದರಿಕೆ ಪತ್ರ.

ಚಿಕ್ಕೋಡಿ : ನಿಪ್ಪಾಣಿ ಪಟ್ಟಣದದಲ್ಲಿ ‘ನಿಮ್ಮ ರಾಮ ಮಂದಿರ ಸ್ಫೋಟಿಸುತ್ತೇವೆ, ಸುಧಾರಿಸಿಕೊಳ್ಳಿ’ ಎಂದು ಅಲ್ಲಾ ಹು ಅಕ್ಬರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ.ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ‌ ಮಂದಿರವನ್ನ ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ. ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.

101 ವರ್ಷಗಳ ಇತಿಹಾಸ ಹೊಂದಿದ ಶ್ರೀ ರಾಮ ಮಂದಿರದ ಗರ್ಭ ಗುಡಿಯಲ್ಲಿಮೊದಲನೆಯ ಪತ್ರ ಪತ್ತೆಯಾಗಿದ್ದು,ಎರಡನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿದೆ . ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ. ನಮ್ಮ ಮಂದಿರಕ್ಕೆ ರಕ್ಷಣೆ ನೀಡುವುದರ ಜೊತೆಗೆ ಬೆದರಿಕೆ ಪತ್ರ ಬರೆದಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಿಪ್ಪಾಣಿ ಪಟ್ಟಣದ ಶ್ರೀ ರಾಮ ಮಂದಿರದ ಆಡಳಿತ ಮಂಡಳಿ ನಿಪ್ಪಾಣಿ ಶಹರ ಠಾಣೆಯಲ್ಲಿ ದೂರು ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular