Tuesday, May 12, 2026
Flats for sale
Homeದೇಶಚೆನೈ : ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ...

ಚೆನೈ : ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ಸನಾತನವನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್.

ಚೆನ್ನೈ : ಡಿಎಂಕೆ ಶಾಸಕ ಹಾಗೂ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು 2023ರಲ್ಲಿ ನೀಡಿದ್ದ “ಸನಾತನ ಧರ್ಮ ನಿರ್ಮೂಲನೆ ಆಗಬೇಕು” ಎಂಬ ವಿವಾದಾತ್ಮಕ ಹೇಳಿಕೆಯನ್ನು ಮತ್ತೆ ವಿಧಾನಸಭೆಯಲ್ಲಿ ಪುನರಾವರ್ತಿಸಿದ್ದಾರೆ.

ವಿಧಾನಸಭೆ ಚರ್ಚೆಯ ವೇಳೆ ಮಾತನಾಡಿದ ಉದಯನಿಧಿ ಸ್ಟಾಲಿನ್, “ಜನರನ್ನು ವಿಭಜಿಸುವ ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದಾರೆ. ಈ ವೇಳೆ ಮುಖ್ಯಮಂತ್ರಿ ವಿಜಯ್ ಸಭಾಂಗಣದಲ್ಲಿ ಎದುರಿನ ಸಾಲಿನಲ್ಲಿ ಉಪಸ್ಥಿತರಿದ್ದರು.

ಉದಯನಿಧಿ ಸ್ಟಾಲಿನ್ ಅವರ ಈ ಹೇಳಿಕೆ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. 2023ರಲ್ಲಿ ಕೂಡ ಅವರ ಇದೇ ಹೇಳಿಕೆ ರಾಷ್ಟ್ರ ಮಟ್ಟದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಡಿಎಂಕೆ ಪಕ್ಷದ ನಾಯಕರು ಇದನ್ನು ಸಾಮಾಜಿಕ ಅಸಮಾನತೆ ವಿರುದ್ಧದ ಅಭಿಪ್ರಾಯ ಎಂದು ಸಮರ್ಥಿಸಿಕೊಂಡರೆ, ವಿರೋಧ ಪಕ್ಷಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆ ಎಂದು ಟೀಕಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular