Thursday, March 5, 2026
Flats for sale
Homeರಾಜ್ಯತುಮಕೂರು : ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ,ನಾಲ್ವರಿಗೆ ಗಂಭೀರ ಗಾಯ.!

ತುಮಕೂರು : ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ,ನಾಲ್ವರಿಗೆ ಗಂಭೀರ ಗಾಯ.!

ತುಮಕೂರು : ಖಾಸಗಿ ಬಸ್-ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನಲ್ಲಿರುವ ಇರಕಸಂದ್ರ ಕಾಲೋನಿ ಬಳಿಯಿರುವ ವಡ್ಡರಹಳ್ಳಿಯಲಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.ಇರಕಸಂದ್ರ ಕಾಲೋನಿಯಿಂದ ಕೋಳಾಲ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

.

RELATED ARTICLES

LEAVE A REPLY

Please enter your comment!
Please enter your name here

Most Popular