Thursday, July 23, 2026
Homeರಾಜ್ಯತುಮಕೂರು : ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು..!

ತುಮಕೂರು : ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು..!

ತುಮಕೂರು : ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ದುರ್ಘಟನೆ ಸಂಭವಿಸಿದೆ.

ಮೃತರನ್ನು ರೇವಣ್ಣ, ರೇವಣ್ಣ ಪುತ್ರ ಶರತ್, ಹಾಗೂ ದಯಾನಂದ್ ಎಂದು ತಿಳಿಯಲಾಗಿದೆ.

ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನ ಮಾರಸಂದ್ರ ಗ್ರಾಮದ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು ಇಂದು ಗ್ರಾಮದಲ್ಲಿ ಇಟ್ಟಿದ್ದ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿದ್ದು ದಂಡಿನ ಶಿವರ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular