ತುಮಕೂರು : ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನಪ್ಪಿದ ಘಟನೆ ನಡೆದಿದೆ.ಸಂಕ್ರಾಂತಿ ಹಬ್ಬದ ಸಂಭ್ರಮದ ಸಮಯ ತುಮಕೂರಿನಲ್ಲಿ ಶಿರಾ ತಾಲೂಕಿನ ಕುಂಟೇಗೌಡನಹಳ್ಳಿ ಗೇಟ್ ಬಳಿ ಕಾರಿಗೆ ಪಂಚರ್ ಹಾಕುವಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತುಮಕೂರು ಕಡೆಯಿಂದ ಶಿರಾಗೆ ಹೋಗುತ್ತಿರುವಾಗ ಕಾರು ಟೈರ್ ಪಂಚರ್ ಆಗಿದೆ ಆ ಸಂದರ್ಭದಲ್ಲಿ ಪಂಚರ್ ಹಾಕುತ್ತಿರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40), ಉಮೇಶ್(40) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


