Friday, November 22, 2024
Flats for sale
Homeರಾಶಿ ಭವಿಷ್ಯತುಳಸಿ ಹಬ್ಬದ ಆಚರಣೆಯ ವಿವರ.

ತುಳಸಿ ಹಬ್ಬದ ಆಚರಣೆಯ ವಿವರ.

ಬೆಂಗಳೂರು : ಕೃಷ್ಣನ ಮೂರ್ತಿ ಮತ್ತು ತುಳಸಿಯ ವಿವಾಹವನ್ನು ಮಾಡಿಸುವುದೇ ಈ ಹಬ್ಬದ ವೈಶಿಷ್ಟ್ಯ ಉತ್ಥಾನ ಎಂದರೆ ಏಳುವುದು ಎಂದರ್ಥ. ಅಂದರೆ, ಶ್ರೀಮನ್ನಾರಾಯಣನು ಪಾಲ್ಗಡಲಿನಲ್ಲಿ ತನ್ನ ಸುಖಶಯನದಿಂದ ಮೇಲಕ್ಕೆದ್ದು, ತನ್ನ ನಿದ್ರಾಮುದ್ರೆಯನ್ನು ಭಕ್ತರಿಗೆ ಸಾಕ್ಷಾತ್ಕರಿಸುವ ಈ ದಿನವನ್ನು ಕ್ಷೀರಾಭಿವ್ರತವೆಂದು ಹಲವು ಕಡೆ ಆಚರಿಸುವರು.

ತುಳಸೀ ಕಲ್ಯಾಣ ದೀಪಾವಳಿ ಸಂಭ್ರಮ ಮುಗಿಯುತ್ತಿರುವ ಬೆನ್ನಲ್ಲೇ ಕಾರ್ತಿಕ ಮಾಸದ ವೈಭವ. ಇದನ್ನು ಮಾಡುವ ಹಿಂದಿನ ದಿವಸ ತುಳಸೀ ವೃಂದಾವನವನ್ನು ಸ್ವಚ್ಚಗೊಳಿಸಿ, ಬಣ್ಣ ಹಚ್ಚಿ ಶೃಂಗರಿಸುತ್ತಾರೆ. ವೃAದಾವನದಲ್ಲಿ ಕಬ್ಬು, ಚೆಂಡು ಹೂವು, ಹುಣಸೆ ಹಣ್ಣು, ನೆಲ್ಲಿಕಾಯಿ ಇವುಗಳನ್ನು ಇಡುತ್ತಾರೆ. ಈ ವಿವಾಹ ಸಮಾರಂಭವನ್ನು ಸಂಜೆಯ ಸಮಯದಲ್ಲಿ ನೆರವೇರಿಸುತ್ತಾರೆ.

ಕಾರ್ತಿಕ ಮಾಸದಲ್ಲಿ ಪ್ರತಿದಿನ ತುಳಸಿಯನ್ನು ಪೂಜಿಸಿ ನಮಸ್ಕರಿಸಿದರೆ ಒಂದು ಯುಗದಲ್ಲಿ ಮಾಡಿದ ಪಾಪದಿಂದ ಮುಕ್ತಿ ದೊರೆಯುತ್ತದೆ ಎಂಬ ನAಬಿಕೆ ಹುಟ್ಟುಹಾಕಿರುವುದೂ ಇದಕ್ಕಾಗಿಯೇ. ಉತ್ಥಾನ ದ್ವಾದಶಿಯಂದು ತುಳಸೀ ವೃಂದಾವನಕ್ಕೆ ಧೂಪ-ದೀಪ-ನೈವೇದ್ಯಗಳಿಂದ ಪೂಜಿಸುತ್ತಾರೆ.

ವಿಶೇಷವಾಗಿ ಶಂಖದಿAದ ಹಾಲಿನ ಅಭಿಷೇಕ ಮಾಡಬೇಕು. ಅಂದು ತುಳಸಿಯನ್ನು ಅಗಸೆ ಹಾಗೂ ನೆಲ್ಲಿ ಟೊಂಗೆಯೊAದಿಗೆ ಕಟ್ಟಿ ವೈಭವದಿಂದ ಪೂಜಿಸಿ, ಆರತಿ ಮಾಡಿ, ದಾನಾದಿಗಳನ್ನು ಮಾಡಬೇಕು. ಅಗಸೆ, ನೆಲ್ಲಿ ಮತ್ತು ತುಳಸಿ ಇವು ಮೂರು ಬಹಳ ಪವಿತ್ರವಾದುವು.

ವೃಂದಾದೇವಿಯ ಅನುಗ್ರಹಕ್ಕೆ ಪಾತ್ರರಾಗಲು ತ್ರಿಮೂರ್ತಿಗಳೂ ಅವರ ಪತ್ನಿಯರಾದ ಶಕ್ತಿದೇವಿಯರೂ ಮತ್ತು ಇತರೆ ದೇವತೆಗಳೂ ಉತ್ಥಾನ ದ್ವಾದಶಿಯಂದು ಒಟ್ಟಾಗಿ ಸೇರುತ್ತಾರೆಂದೂ, ಇಷ್ಟಾರ್ಥಗಳನ್ನು ಪೂರೈಸುತ್ತಾರೆಂದು, ಭಕ್ತಿಯಿಂದ ತುಳಸಿಗೆ ನಮಿಸಿ ಕೃತಾರ್ಥರಾಗುತ್ತಾರೆ.ತುಳಸಿಯ ಪೌರಾಣಿಕ ಹಿನ್ನೆಲೆ ಹಿಂದೆ ಸಮುದ್ರ ಮಥನ ಮಾಡುವಾಗ ಬಂದAತಹ ಅಮೃತ ಕಳಶವನ್ನು ಮಹಾವಿಷ್ಣು ಪಡದುಕೊಳ್ಳುತ್ತಾನೆ. ಆ ಸಂದರ್ಭದಲ್ಲಿ ಆತನ ಕಣ್ಣಿನಿಂದ ಆನAದಭಾಷ್ಪ ಉಕ್ಕಿ ಬರುತ್ತದೆ.

ಇದರ ಒಂದು ಹನಿ ಕಳಶದಲ್ಲಿ ಬಿದ್ದಾಗ ಅದು ತುಳಸಿಗಿಡವಾಯಿತು. ಅಮೃತದಿಂದ ಜನಿಸಿದಂತಹ ತುಳಸಿಯನ್ನು ಯಾವ ವಿಧವಾಗಿ ಉಪಯೋಗಿಸಿದರೂ ಅದು ಅಮೃತಮಯವಾಗುತ್ತದೆ. ಇಷ್ಟು ಪವಿತ್ರವಾದ ತುಳಸಿ ಶ್ರೀಮನ್ನಾರಾಯಣನಿಗೆ ಲಕ್ಷಿ÷್ಮಯಷ್ಟೇ ಪ್ರಿಯಳು. ಆದುದರಿಂದಲೇ ಮೂರೂ ಲೋಕಗಳಲ್ಲಿ ತುಳಸಿಗೆ ಸಮಾನವಾದುದು ಯಾವುದೂ ಇಲ್ಲ ಎಂದು ತಿಳಿಯಲಾಗಿದೆ.

ಸಂಜೀವಿನಿ: ವಿವಿಧ ಕಾಯಿಲೆ ವಾಸಿಮಾಡಿ ಜೀವ ನೀಡಬಲ್ಲ ಸಂಜೀವಿನಿಯೂ ಹೌದು. ಇದಕ್ಕಾಗಿಯೇ ಆಯುರ್ವೇದದಲ್ಲಿ ತುಳಸಿಗೆ ಪ್ರಥಮ ಸ್ಥಾನ. ಎಲೆ, ಬೇರು, ಬೀಜ ಸೇರಿದಂತೆ ಸಂಪೂರ್ಣ ಗಿಡವೇ ಔಷಧಯುಕ್ತ. ತುಳಸಿಯ ವಿಶಿಷ್ಟ ಸುವಾಸನೆಯು ಕ್ರಿಮಿ ಕೀಟ, ರೋಗಾಣುಗಳನ್ನು ದೂರವಿಡುತ್ತದೆ.

ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಿಟ್ಟರೆ ಸೂಕ್ಷ್ಮ ರೋಗಾಣುಗಳು ನಾಶವಾಗುತ್ತದೆ. ಸೂರ್ಯೋದಯಕ್ಕೆ ಮುನ್ನ, ಅಂದರೆ ಬ್ರಾಹ್ಮಿ ಮುಹೂರ್ತದಲ್ಲಿ ಇದರ ಸೇವನೆಯಿಂದ ಸಾಕಷ್ಟು ರೋಗ ನಿವಾರಣೆಯಾಗುತ್ತದೆ. ಇದರ ಎಲೆಗಳ ಸೇವನೆಯಿಂದ ಸ್ವಸ್ಥ ಹಾಗೂ ಸುಂದರವಾದ ಮೈಕಟ್ಟನ್ನು ಹೊಂದಬಹುದು. ಅಜೀರ್ಣ, ಮಲಬದ್ಧತೆ, ಗ್ಯಾಸ್, ಹುಳಿ ಇತ್ಯಾದಿಗಳಿಗೆ ಇದು ರಾಮಬಾಣ. ತುಳಸಿ ಗಿಡದ ಹತ್ತಿರ ಓದುವುದು, ಸಚ್ಚಿಂತನೆ
ಮಾಡುವುದರಿAದ, ದೀಪವನ್ನು ಹಚ್ಚುವುದರಿಂದ ಹಾಗೂ ತುಳಸಿ ಗಿಡದ ಸುತ್ತ ಪ್ರದಕ್ಷಿಣೆ ಹಾಕುವುದರಿಂದ ಐದು ಇಂದ್ರಿಯಗಳ ವಿಕಾರಗಳು ದೂರವಾಗುತ್ತವೆ.ಇನ್ನೂ ಹಲವು ಅದ್ಭುತ ಔಷಧೀಯ ಗುಣ ಇದರಲ್ಲಿವೆ

RELATED ARTICLES

LEAVE A REPLY

Please enter your comment!
Please enter your name here

Most Popular