Friday, June 5, 2026
Flats for sale
Homeಕ್ರೈಂದಾವಣಗೆರೆ : ಪಾಕಿಸ್ತಾನ ಮೂಲದ ಶಂಕಿತ ಐ.ಎಸ್‌.ಐ.ಎಸ್ ಸಂಪರ್ಕ, ದಾವಣಗೆರೆ-ತುಮಕೂರಿನ ಇಬ್ಬರು ಯುವಕರ ಬಂಧನ.

ದಾವಣಗೆರೆ : ಪಾಕಿಸ್ತಾನ ಮೂಲದ ಶಂಕಿತ ಐ.ಎಸ್‌.ಐ.ಎಸ್ ಸಂಪರ್ಕ, ದಾವಣಗೆರೆ-ತುಮಕೂರಿನ ಇಬ್ಬರು ಯುವಕರ ಬಂಧನ.

ದಾವಣಗೆರೆ : ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಸಂಚು ರೂಪಿಸಿದ್ದರೆಂಬ ಆರೋಪದ ಮೇಲೆ ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಇಬ್ಬರು ಯುವಕರನ್ನು ಕರ್ನಾಟಕ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ.

ಗುಪ್ತಚರ ಇಲಾಖೆಯ ಮಾಹಿತಿ ಮೇರೆಗೆ ತುಮಕೂರು ಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ದಾವಣಗೆರೆಯ ಬಿಡಿ ಲೇಔಟ್ ನಿವಾಸಿ 22 ವರ್ಷದ ಜಮೀರ್ ಖಾನ್ ಹಾಗೂ ತುಮಕೂರಿನ ಅಲ್ಲಾಭಕ್ಷಿ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಆರೋಪಿಗಳು ಪಾಕಿಸ್ತಾನ ಮೂಲದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಎಂಬವರೊಂದಿಗೆ ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದು, ಐಎಸ್‌ಐಎಸ್ ಪರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು ಎಂದು ತನಿಖಾ ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯಲ್ಲಿ ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯೋಜನೆ ರೂಪಿಸಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದ್ದು, ಕೆಲ ಗುರಿಗಳನ್ನು ಗುರುತಿಸಿ ಕಾರ್ಯಾಚರಣೆಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ.

ಮುಂಬೈ ಮೂಲದ ಉದ್ಯಮಿಯೊಬ್ಬರನ್ನು ಗುರಿಯಾಗಿಸಿ ಟಾಸ್ಕ್ ನೀಡಲಾಗಿತ್ತು ಎಂಬ ಮಾಹಿತಿಯೂ ಹೊರಬಿದ್ದಿದೆ. ಜಮೀರ್ ಖಾನ್ ಹಿನ್ನೆಲೆ ದಾವಣಗೆರೆಯ ಬಿಡಿ ಲೇಔಟ್ ನಿವಾಸಿಕಟ್ಟಡ ನಿರ್ಮಾಣ ಕಾರ್ಮಿಕನಾಗಿ ಕೆಲಸ ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗಕ್ಕಾಗಿ ಸಂಚರಿಸುತ್ತಿದ್ದ ಪೋಷಕರು ಹಾಗೂ ಇಬ್ಬರು ಸಹೋದರರೊಂದಿಗೆ ವಾಸ ಇನ್‌ಸ್ಟಾಗ್ರಾಂ ಮೂಲಕ ಪಾಕಿಸ್ತಾನ ಮೂಲದ ವ್ಯಕ್ತಿಗಳ ಪರಿಚಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಆರೋಪಿಗಳ ಜಾಲ, ಸಂಪರ್ಕಗಳು ಹಾಗೂ ಸಂಚಿನ ವ್ಯಾಪ್ತಿಯನ್ನು ಭದ್ರತಾ ಸಂಸ್ಥೆಗಳು ಪರಿಶೀಲಿಸುತ್ತಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular