Friday, March 13, 2026
Flats for sale
Homeಕ್ರೀಡೆದುಬೈ : ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಗೆ ಐಸಿಸಿ ನಿಷೇಧ..!

ದುಬೈ : ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಗೆ ಐಸಿಸಿ ನಿಷೇಧ..!

ದುಬೈ : ಬಾಂಗ್ಲಾದೇಶದ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಬೌಲಿಂಗ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನಿಷೇಧ ಹೇರಿದೆ.ಬೌಲಿಂಗ್ ವೇಳೆ ಮೊಣಕೈಯನ್ನು ೧೫ ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿದ ಹಿನ್ನೆಲೆಯಲ್ಲಿ ಶಕೀಬ್ ಬೌಲಿಂಗ್‌ಗೆ ನಿಷೇಧ ಹೇರಲಾಗಿದೆ.

ಇದು ಐಸಿಸಿಯ ದೇಶೀಯ ಮತ್ತು ವಿದೇಶದಲ್ಲಿ ನಡೆಯಲಿರುವ ಪಂದ್ಯಗಳಿಗೆ ಅನ್ವಯವಾಗಲಿದೆ.ಡಿಸೆಂಬರ್‌ನಲ್ಲಿ ಇಂಗ್ಲೆಂಡಿನ ಲೌಬರೋ ವಿಶ್ವವಿದ್ಯಾನಿಲಯದಲ್ಲಿ ದಿನನಿತ್ಯದ ಮೌಲ್ಯಮಾಪನದ ನಂತರ, ಬೌಲಿಂಗ್
ಮಾಡುವಾಗ ಶಕೀಬ್ ಮೊಣಕೈಯನ್ನು ೧೫ ಡಿಗ್ರಿಗಳಿಗಿಂತ ಹೆಚ್ಚು ವಿಸ್ತರಿಸಿರುವುದು ಕಂಡುಬAದಿದೆ.

ಈ ಹಿನ್ನೆಲೆಯಲ್ಲಿ ನಿಷೇಧ ಹೇರಲಾಗಿದೆ. ಐಸಿಸಿ ನಿಯಮದ ಪ್ರಕಾರ ಬೌಲಿಂಗ್ ವೇಳೆ ಮೊಣಕೈ ವಿಸ್ತರಣೆಯು ೧೫ ಡಿಗ್ರಿ ಮಿತಿಯನ್ನು ಮೀರುವಂತಿಲ್ಲ. ಯಾವುದೇ ಬೌಲರ್‌ನ ಮೊಣಕೈ ಈ ಮಿತಿಯನ್ನು ಮೀರಿ ವಿಸ್ತರಿಸಿದರೆ
ಕಾನೂನುಬಾಹಿರ ಬೌಲಿಂಗ್ ಎಂದು ಪರಿಗಣಿಸಲಾಗುತ್ತದೆ.ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಅಃ) ಸ್ವತಂತ್ರವಾಗಿ ಮೌಲ್ಯಮಾಪನ ನಡೆಸಿ ಶಕೀಬ್ ಅವರ ಬೌಲಿಂಗ್ ಐಸಿಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದು ಖಚಿತಪಡಿಸಿದೆ.

ವರದಿ ಬಂದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮತ್ತು ದೇಶೀಯ ಪಂದ್ಯಗಳನ್ನು ಒಳಗೊಂಡಿರುವ ತನ್ನ ಅಧಿಕಾರ ವ್ಯಾಪ್ತಿಯಲ್ಲಿರುವ ಎಲ್ಲಾ ಟೂರ್ನಿಗಳಲ್ಲಿ ಬೌಲಿಂಗ್‌ನಿAದ ಅವರನ್ನು ಅಮಾನತುಗೊಳಿಸುವುದಾಗಿ ಇಸಿಬಿ
ಘೋಷಿಸಿತು.

RELATED ARTICLES

LEAVE A REPLY

Please enter your comment!
Please enter your name here

Most Popular