Saturday, March 14, 2026
Flats for sale
Homeರಾಜಕೀಯಧಾರವಾಡ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 18 ಕೋಟಿ ರೂ...

ಧಾರವಾಡ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಪ್ತನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ 18 ಕೋಟಿ ರೂ ಪತ್ತೆ!

ಧಾರವಾಡ : ಚುನಾವಣೆ ಎಂದರೆ ರಾಜಕಾರಣಿಗಳಿಗೆ ಜಾತ್ರೆಯ ತರಹ ಆಗ್ಬಿಟ್ಟಿದೆ,ಅದರಲ್ಲೂ ಹಣ ಹೂಡಿಕೆ ಮಾಡಿ 5 ವರ್ಷದಲ್ಲಿ 500% ಜಾಸ್ತಿ ಮಾಡುವುದು ಈ ರಾಜಕೀಯ ನಾಯಕರ ಗುರಿ ಎಂದುದು ಎಲ್ಲರಿಗೂ ತಿಳಿದ ವಿಚಾರ.

ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ18 ಕೋಟಿ ರೂಪಾಯಿ ಧಾರವಾಡದ ದಾಸನಕೊಪ್ಪ ರಸ್ತೆಯಲ್ಲಿರೋ ಆರ್ನಾ ರೆಸಿಡೆನ್ಸಿ ಅಪಾರ್ಟ್​​​​​​​ಮೆಂಟ್​​​​ನ 3ನೇ ಮಹಡಿಯಲ್ಲಿರೋ ಯು.ಬಿ.ಶೆಟ್ಟಿ ಕಚೇರಿಯ ಅಕೌಂಟೆಂಟ್ ಬಸವರಾಜ ಎಂಬುವರ ಮನೆಯಲ್ಲಿ ಪತ್ತೆಯಾಗಿದೆ.ಅಕ್ರಮವಾಗಿ ಮದ್ಯವಿದೆ ಎಂದು ಮಾಹಿತಿ ಮೇರೆಗೆ ತನಿಖೆ ನಡೆಸಿದ ಚುನಾವಣಾ ಅಧಿಕಾರಿಗಳಿಗೆ ಶಾಕ್ ಆಗಿದೆ.ಯಾಕಂದ್ರೆ ಒಳಹೊಕ್ಕ ಚುನಾವಣಾ ಕ್ಷಿಪ್ರ ಕಾರ್ಯಪಡೆ ಮನೆಯ ಮೂಲೆ ಮೂಲೆಯಲ್ಲಿ ಹುಡುಕಾಡಿದ್ದರು. ಆದ್ರೆ, ಎಲ್ಲೂ ಮದ್ಯದ ಬಾಟಲಿ ಸಿಕ್ಕಿಲ್ಲ. ಬದಲಾಗಿ ಕಂತೆ ಕಂತೆ 18 ಕೋಟಿ ರೂಪಾಯಿ ಹಣ ಸಿಕ್ಕಿದೆ. ಇದು ಬಸವರಾಜ ದುತ್ತನ್ನವರ್ ಎಂಬುವವರ ಮನೆ ಎಂದು ತಿಳಿದಿದೆ.ಇದೀಗ ಐಟಿ ಅಧಿಕಾರಿಗಳು ಸಿಕ್ಕ 18 ಕೋಟಿ ರೂಪಾಯಿ ಹಣವನ್ನು ಹುಬ್ಬಳ್ಳಿಯ ಕೇಶ್ವಾಪುರದ ಎಸ್​ಬಿಐ ಬ್ಯಾಂಕ್​ಗೆ ತೆಗೆದುಕೊಂಡು ಹೋಗಿ ಐಟಿ ಖಾತೆಗೆ ಜಮೆ ಮಾಡಿದ್ದಾರೆ.

ಯುಬಿ ಶೆಟ್ಟಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆಪ್ತ ಎನ್ನಲಾಗಿದೆ. ಇನ್ನು ಬೆಳಗಾವಿ ಹಾಗೂ ಧಾರವಾಡ ಲೋಕಸಭಾ ಚುನಾವಣೆಗೆ ಈ ಹಣವನ್ನು ಮೀಸಲಿಟ್ಟಿದ್ದು, ಮುಂದಿನ ದಿನಗಳಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು ಎನ್ನುವ ಆರೋಪಗಳು ಕೇಳಿಬಂದಿವೆ.ಈ ಹಣದ ಬಗ್ಗೆ ಐಟಿ ಅಧಿಕಾರಿಗಳು ಉದ್ಯಮಿ ಯು.ಬಿ ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ಅವರನ್ನು ವಿಚಾರಣೆ ನಡೆಸಿದ್ದಾರೆ. ಅಲ್ಲದೇ ನಿನ್ನೆ ರಾತ್ರಿಯಿಂದಲೂ ಹಣವನ್ನ ಎಣಿಕೆ ಮಾಡಿದ್ದು, ಇದೀಗ ಎಲ್ಲ ಪ್ರಕ್ರಿಯೆ ಮುಗಿದಿವೆ. ಹೀಗಾಗಿ ಅಧಿಕಾರಿಗಳು 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ಎರಡು ಇನ್ನೋವಾ ಕಾರುಗಳಲ್ಲಿ ತುಂಬಿಕೊಂಡು ಪೊಲೀಸ್ ಭದ್ರತೆಯೊಂದಿಗೆ ತೆರಳಿದ್ದಾರೆ.

ಧಾರವಾಡದ ಉದ್ಯಮಿ ಯು.ಬಿ.ಶೆಟ್ಟಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದು, ಬೆಂಗಳೂರಿನ ರಾಮಲಿಂಗಂ ಕನಸ್ಟ್ರಕ್ಷನ್​​​​ಗೆ ಸಂಬಂಧಿಸಿದ ದಾಖಲೆಗಳನ್ನೂ ಸಹ ನೀಡಿದ್ದಾರೆ ಆದರೆ ದಾಖಲೆ ಪರಿಶೀಲನೆ ಮಾಡಿದ ಅಧಿಕಾರಿಗಳು ಅಸಲಿ ಕಥೆ ಏನು ಎನ್ನುವುದನ್ನು ಬಹಿರಂಗಪಡಿಸಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular