ಧಾರವಾಡ : ಜಿಲ್ಲೆಯ ಸಪ್ತಾಪುರದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ಸಂತೋಷ ಅನಿಶೆಟ್ಟರ ನಿವಾಸದ ಮೇಲೆ ಕರ್ನಾಟಕ ಲೋಕಾಯುಕ್ತರು ಗುರುವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕೊಡಗು ಹೆಚ್ಚುವರಿ ಡಿಸಿ ನಂಜುಂಡೇಗೌಡ ಅವರ ಮನೆ ಮತ್ತು ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿರುವ ಗೌಡರ ಸಂಬಂಧಿಕರ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾರಂಗಿ ಅಣೆಕಟ್ಟಿನ ಸೂಪರಿಂಟೆಂಡೆಂಟ್ ಎಂಜಿನಿಯರ್ ರಘುಪತಿ ಅವರ ಮನೆಯಲ್ಲೂ ಶೋಧ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಮೈಸೂರು ವಿಭಾಗದ ಎಸ್ಪಿ ಸುರೇಶ್ ಬಾಬು ತಿಳಿಸಿದ್ದಾರೆ.


