Friday, March 13, 2026
Flats for sale
Homeದೇಶನವದೆಹಲಿ ; ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರ ಸಭೆ.

ನವದೆಹಲಿ ; ಜೂನ್ 1 ರಂದು ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರ ಸಭೆ.

ನವದೆಹಲಿ : ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರು ಜೂನ್ ೧ರಂದು ಸಭೆ ಸೇರಲು ನಿರ್ಧರಿಸಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್ 4 ರಂದು ಹೊರಬೀಳಲಿದ್ದು, ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈಗಾಗಲೇ ಆರು ಹಂತಗಳ ಲೋಕಸಭಾ ಚುನಾವಣೆ ಮುಗಿದಿರುವ ಬೆನ್ನಲ್ಲೆ ಇಂಡಿಯಾ ಮೈತ್ರಿಕೂಟದಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಏಳನೇ ಹಾಗೂ ಅಂತಿಮ ಹಂತದ ಮತದಾನ ಕೂಡಾ ಅದೇ ದಿನ ನಡೆಯಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಭೆಗೆ ಆಹ್ವಾನಿಸಲಾಗಿದೆ. ಅಬಕಾರಿ ಹಗರಣದಲ್ಲಿ ಮೇ 10 ರಂದು ಬAಧನಕ್ಕೊಳಗಾದ ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಸಂಚಾಲಕನನ್ನು ಸುಪ್ರೀAಕೋರ್ಟ್ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದು, ಜೂನ್ ೨ರಂದು ಅವರು ಮತ್ತೆ ಶರಣಾಗಬೇಕಿದೆ.

ಇಂಡಿಯಾ ಕೂಟದ ಪಕ್ಷವಾಗಿ ಆಮ್ ಆದ್ಮಿ ಪಕ್ಷ ದೆಹಲಿ, ಗೋವಾ, ಗುಜರಾತ್ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಜತೆ ಸ್ಥಾನ ಹೊಂದಾಣಿಕೆ ಮಾಡಿಕೊಂಡಿದೆ. ಆದರೆ ಎರಡೂ ಪಕ್ಷಗಳು ಪಂಜಾಬ್ ನಲ್ಲಿ ಪ್ರತ್ಯೇಕವಾಗಿಯೇ ಸ್ಪರ್ಧಿಸಿವೆ. ಇಲ್ಲಿ ಆಮ್ ಆದ್ಮಿ ಅಧಿಕಾರಾರೂಢ ಪಕ್ಷವಾಗಿದ್ದರೆ, ಕಾಂಗ್ರೆಸ್ ಪ್ರಮುಖ ವಿರೋಧ ಪಕ್ಷ. ಪಂಜಾಬ್ ನಲ್ಲಿ ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಕೂಟವನ್ನು ಎದುರಿಸುವ ಉದ್ದೇಶದಿಂದ ೨೮ ಪಕ್ಷಗಳನ್ನು ಒಳಗೊಂಡ ಇಂಡಿಯನ್ ನ್ಯಾಷನಲ್ ಡೆವಲಪ್ಮೆಂಟಲ್ ಇನ್ಕೂಲೀಸಿವ್ ಅಲಯನ್ಸ್ (ಇಂಡಿಯಾ) ಮೈತ್ರಿಕೂಟ ರಚನೆಯಾಗಿತ್ತು. ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಬಗ್ಗೆ ಎನ್ ಡಿಎ ತೀವ್ರ ಕಸರತ್ತು ನಡೆಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular