Monday, May 18, 2026
Flats for sale
Homeಗ್ಯಾಜೆಟ್ / ಟೆಕ್ನವದೆಹಲಿ : ಡಿಜಿಟಲ್ ಅರೆಸ್ಟ್ ವಂಚನೆಗೆ ಕಟ್ಟುನಿಟ್ಟಿನ ಕ್ರಮ: 9,400 ವಾಟ್ಸಾಪ್ ಖಾತೆಗಳು ನಿಷೇಧ.

ನವದೆಹಲಿ : ಡಿಜಿಟಲ್ ಅರೆಸ್ಟ್ ವಂಚನೆಗೆ ಕಟ್ಟುನಿಟ್ಟಿನ ಕ್ರಮ: 9,400 ವಾಟ್ಸಾಪ್ ಖಾತೆಗಳು ನಿಷೇಧ.

ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಈ ವರ್ಷದ ಜನವರಿಯಿಂದ ಇಂದಿನವರೆಗೆ ಇಂತಹ ವಂಚನೆಗಳಲ್ಲಿ ತೊಡಗಿದ್ದ ಸುಮಾರು ೯,೪೦೦ ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೈಬರ್ ಅಪರಾಧ ಸಮನ್ವಯ ಕೇಂದ್ರ ಸಲ್ಲಿಸಿದ ವರದಿಯ ಪ್ರಕಾರ, ಮೆಟಾ ಒಡೆತನದ ವಾಟ್ಸಾಪ್ ಈ ಕ್ರಮ ಕೈಗೊಂಡಿದೆ.

ಸುಪ್ರೀಂ ಕೋರ್ಟ್‌ನ ಹೆಸರನ್ನು ದುರುಪಯೋಗಪಡಿಸಿಕೊಂಡು ನಕಲಿ ಆದೇಶಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಪೀಠ ತೀವ್ರ ಆತಂಕ ವ್ಯಕ್ತಪಡಿಸಿದೆ.

ಸಿಜೆಐ ಸೂರ್ಯ ಕಾಂತ್ ನೇತೃತ್ವದ ಪೀಠ ಈ ವಿಷಯವನ್ನು ಸ್ವಯಂ ಪ್ರೇರಿತವಾಗಿ ಪರಿಗಣಿಸಿ (ಸುವೋ ಮೋಟೋ) ವಿಚಾರಣೆ ನಡೆಸುತ್ತಿದೆ.

ಡಿಜಿಟಲ್ ವಂಚನೆಗಳನ್ನು ತಡೆಯಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸೂಚನೆ ಸಿಕ್ಕಿದೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳನ್ನು ತಡೆಗಟ್ಟಲು ಸರ್ಕಾರ ಮತ್ತು ನ್ಯಾಯಾಂಗ ತೀವ್ರ ಗಮನ ಹರಿಸಿದ್ದು, ದೊಡ್ಡ ಮಟ್ಟದ ಕ್ರಮ ಆರಂಭವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular