ಮುಂಬೈ : ಹಿರಿಯ ಕೈಗಾರಿಕೋದ್ಯಮಿ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಮತ್ತು ಟಾಟಾ ಗ್ರೂಪ್ನ ಗೌರವಾನ್ವಿತ ಅಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 86 ವರ್ಷ,ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ರತನ್ ಟಾಟಾ ಅವರ ನಿಧನವನ್ನು ಖಚಿತಪಡಿಸಿದ್ದಾರೆ.
ಶ್ರೀಮತಿ ಸೂನಿ ಮತ್ತು ನಾವಲ್ ಹರ್ಮುಸ್ ಜಿ ಟಾಟಾ ದಂಪತಿಯ ಹಿರಿಯ ಮಗನಾಗಿ ರತನ್ ಟಾಟಾ ಬೊಂಬಾಯಿನಲ್ಲಿ 1937ರಲ್ಲಿ ಜನಿಸಿದರು. ರತನ್ ಟಾಟಾ ಅವರಿಗೆ ಭಾರತ ಸರ್ಕಾರವು 2008 ರಲ್ಲಿ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ಅವಿವಾಹಿತ ರತನ್ ಟಾಟಾ ಅವರು ಅಪರೂಪದ ಉದ್ಯಮಿಯಾಗಿ ಬೆಳೆದು ದೇಶದ ಕೈಗಾರಿಕಾ ಕ್ಷೇತ್ರದಲ್ಲಿ ದಂತಕತೆಯಾಗಿದ್ದರು. ದೇಶದ ಆಸ್ತಿಯಾಗಿದ್ದ ರತನ್ ಟಾಟಾ ಅವರು ತಮ್ಮ ಗಳಿಕೆಯನ್ನೆಲ್ಲಾ ದಾನಧರ್ಮಗಳಲ್ಲಿ ವಿನಿಯೋಗಿಸಿದ್ದಾರೆ.
ರತನ್ ನಾವಲ್ ಟಾಟಾ ( ಡಿಸೆಂಬರ್ 28, 1937)ಅನೇಕ ಪ್ರಮುಖ ಟಾಟಾ ಉದ್ಯಮಗಳಾದ ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಕಂಪನಿಗಳನ್ನು ಸ್ಥಾಪಿಸಿದ್ದರು.
ರತನ್ ಟಾಟಾ ಅವರು ಕೈಗಾರಿಕೋದ್ಯಮ, ವ್ಯಾಪಾರ ಸಾಮ್ರಾಜ್ಯದಲ್ಲಿ ತಮ್ಮದೇ ಆದ ವಿಶೇಷ ಗುರುತನ್ನು ಗಳಿಸಿದ್ದವರು. ವ್ಯಾಪಾರದಲ್ಲಿ ಮಾತ್ರವಲ್ಲದೆ ಸಮಾಜ ಸೇವೆ, ಪರೋಪಕಾರಿಯಲ್ಲೂ ರತನ್ ಟಾಟಾ ಅವರಿಗೆ ಸರಿಸಾಟಿ ಯಾರೂ ಇಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಬಹಳ ದಾನ ಧರ್ಮ ಉದಾರಗಳ ರತನ್ ಟಾಟಾ ನಿಜಕ್ಕೂ ಉದಾತ್ತ ವ್ಯಕ್ತಿಯಾಗಿದ್ದರು.
ಕಳೆದ ಕೆಲವು ದಿನಗಳಿಂದ, ಭಾರತದ ಅತಿದೊಡ್ಡ ಸಂಘಟಿತ ಸಂಸ್ಥೆಗಳ ಅಧ್ಯಕ್ಷ ಗೌರವಾನ್ವಿತ, ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ರತನ್ ಟಾಟಾ ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯ ಉದ್ಯಮಿ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ ಎಂದು ಬಣ್ಣಿಸಿದ್ದಾರೆ.
ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಸರ್ಕಾರಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಿಂಧೆ, ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್ಸಿಪಿಎ) ಯಲ್ಲಿ ಜನರು ಗೌರವ ಸಲ್ಲಿಸಲು ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ.
“ಭಾರತದ ಆರ್ಥಿಕತೆಯು ಐತಿಹಾಸಿಕ ಪ್ರಗತಿಯ ತುದಿಯಲ್ಲಿ ನಿಂತಿದೆ. ಮತ್ತು ರತನ್ ಅವರ ಜೀವನ ಮತ್ತು ಕೆಲಸವು ನಾವು ಈ ಸ್ಥಾನದಲ್ಲಿರುವುದಕ್ಕೆ ಬಹಳಷ್ಟು ಸಂಬಂಧವನ್ನು ಹೊಂದಿದೆ.” ರತನ್ ಟಾಟಾ ಅವರ ಅನುಪಸ್ಥಿತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರ ಕ್ಷ ನಲ್ಲಿ ಪೋಸ್ಟ್ ಮಾಡಿದ್ದಾರೆ .


