ನವದೆಹಲಿ ; ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಪ್ರಸ್ತುತ “ಸ್ಥಿರವಾಗಿದೆ” ಮತ್ತು ಅವರನ್ನು ನಿಗಾದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
96 ವರ್ಷ ಎಲ್.ಕೆ ಅಡ್ವಾನಿಯವರು ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ಅವರ ಆರೈಕೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆ ಮಾಜಿ ಉಪಪ್ರಧಾನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಅವರ ಇತ್ತೀಚಿನ ಅರೊಗ್ಯದ ಸಮಸ್ಯೆಯ ಕಾರಣವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ತಿಳಿದುಬಂದಿದೆ.